ಶಿವಮೊಗ್ಗ:ಬಿಜೆಪಿ-ಜೆಡಿಎಸ್ ನಾಯಕರಿಂದ ತಿಪ್ಪರಲಾಗ ಹೊಡೆದರೂ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದಿಲ್ಲ. ಪಾದಯಾತ್ರೆ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಸುತ್ತಿರುವ ಪ್ರಯತ್ನ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟೇ ಕೊಡ್ತಾರೆ: ಟಿ.ಜೆ.ಅಬ್ರಹಾಂ ಸ್ಫೋಟಕ ಹೇಳಿಕೆ
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆ ವಿಚಾರ ಬಿಜೆಪಿ ನಾಯಕರು ಯಾರು?, ಸಿಎಂ ರಾಜೀನಾಮೆ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಬೇಕು. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಕಂಡು ಹೊಟ್ಟೆ ಕಿಚ್ಚಿಗೆ ಬಿಜೆಪಿಯವರು ಪಾದಯಾತ್ರೆ ಶುರು ಮಾಡಿದ್ದಾರೆ. ಅದಕ್ಕೆ ಜೆಡಿಎಸ್ ಅವರು ಸಾಥ್ ನೀಡಿದ್ದಾರೆ ಎಂದು ದೂರಿದರು.
ರಾಜ್ಯದ ಖಾಸಗಿ ಶಾಲೆಗಳ ಬೇಕು-ಬೇಡಗಳನ್ನು ಸರ್ಕಾರದಿಂದ ಚರ್ಚಿಸಲು ಆ.8ರಂದು ಬೆಂಗಳೂರಿನಲ್ಲಿ ಸಭೆ ಆಯೋಜಿಸಲಾಗಿದೆ. ಈಗಾಗಲೇ ಶಿಕ್ಷಕರು ನೀಡಿರುವ ಮನವಿ ಸ್ವೀಕರಿಸಿದ್ದು, ಅವರ ಬೇಡಿಕೆಗಳನ್ನು ಸಿಎಂ ಸೇರಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ನಿರ್ಣಯ ಕೈಗೊಳ್ಳಲಾಗುವುದು. ಶಿಕ್ಷಕರ ಸಮಸ್ಯೆಗೆ ನಮ್ಮ ಸರ್ಕಾರ ಸ್ಪಂದಿಸುತ್ತದೆ. ಅವರ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನ ನಡೆಸುತ್ತೇವೆ. ಶಿಕ್ಷಕರ ಬೇಡಿಕೆಗೆ ರಾಜ್ಯಮಟ್ಟದಲ್ಲಿ ಕಾನೂನಿನ ತಿದ್ದುಪಡಿಯ ಅಗತ್ಯವಿದೆ ಎಂದು ಹೇಳಿದರು.
ಡಿಡಿಪಿಐ, ಬಿಇಒಗಳ ವರ್ಗಾವಣೆಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ನಾವು ವೈಯಕ್ತಿಕವಾಗಿ ಯಾವುದೇ ವರ್ಗಾವಣೆ ಮಾಡಲ್ಲ. ಎಲ್ಲವೂ ಕೌನ್ಸಿಲಿಂಗ್ ಮೂಲಕ ನಡೆಯುತ್ತದೆ. ಆದರೂ ಯಾರಾದರೂ ವರ್ಗಾವಣೆಗೆ ಹಣ ಪಡೆದಿದ್ದರೆ, ಅವನು ಏಜೆಂಟ್ ಇರಲಿ ಅಥವಾ ಯಾರೇ ಇರಲಿ ಎರಡು ನಿಮಿಷದಲ್ಲಿ ಕಿತ್ತು ಬಿಸಾಕುತ್ತೇನೆ ಎಂದು ಎಚ್ಚರಿಕೆ ನೀಡಿದರು.
ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ: ಡಾ.ಶರಣಪ್ರಕಾಶ್‌ ಪಾಟೀಲ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eighteen − 15 =
Remember me
