ಬೆಂಗಳೂರು:ಕಾಂಗ್ರೆಸ್​ ಪಕ್ಷವೇ ನಮಗೆ ಶಕ್ತಿ. ಕಾಂಗ್ರೆಸ್​ ಪಕ್ಷ ನನಗೆ ದೇವಸ್ಥಾನ ಇದ್ದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರು ಹೇಳಿದರು.
ದೆಹಲಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ, ಒಬ್ಬನೇ ಬರಬೇಕು ಅಂತ ಹೇಳಿದ್ದಾರೆ. ಹೀಗಾಗಿ ನಾನೊಬ್ಬನೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿದರು.
ದೇವಸ್ಥಾನ ಎಲ್ಲ ಸುತ್ತಾಡಿದೆ. ನನ್ನ ಆರೋಗ್ಯ ಈಗ ಉತ್ತಮವಾಗಿದೆ. ಜನರು ನಮ್ಮ ನಂಬಿಕೆಯಲ್ಲಿ ಇದ್ದಾರೆ. ಆ ನಂಬಿಕೆ ಉಳಿಸುವ ಕೆಲಸ ಮಾಡುತ್ತೇನೆ. ದೇಶದ ಸಂವಿಧಾನ ಉಳಿಸಿಕೊಳ್ಳುತ್ತೇವೆ. ಎಲ್ಲರ ಆಶೀರ್ವಾದ ನಮ್ಮ ಮೇಲೆ ಇರಲಿ. ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ ಎಂದು ಡಿಕೆಶಿ ತಿಳಿಸಿದರು.
ಡಿಕೆಶಿ ಜತೆ ಶಾಸಕ ಹ್ಯಾರಿಸ್ ಹಾಗೂ ಮಾಗಡಿ ಶಾಸಕ ಬಾಲಕೃಷ್ಣ ಸಹ ದೆಹಲಿಗೆ ಪ್ರಯಾಣ ಬೆಳೆಸಿದರು. ಇದೇ ಸಂದರ್ಭದಲ್ಲಿ ಏರ್ಪೋರ್ಟ್​ನಲ್ಲಿ ಮಾತನಾಡಿದ ಬಾಲಕೃಷ್ಣ, ನಾನು ಇಂದು ನಮ್ಮ ನಾಯಕರ ಜೊತೆ ದೆಹಲಿಗೆ ತೆರಳುತ್ತಿದ್ದೇನೆ. ರಾಜ್ಯದಲ್ಲಿ ಶ್ರಮಪಟ್ಟು ಪಾರ್ಟಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಶ್ರಮಪಟ್ಟಿದ್ದಕ್ಕೆ ಕೂಲಿಯನ್ನು ಕೇಳ್ತಿದ್ದೇವೆ. ನಾನು, ಡಿಕೆಶಿ ಒಂದೇ ಜಿಲ್ಲೆಯವರು ಹೀಗಾಗಿ ಅವರ ಪರ ಒಲವಿದೆ. ನಾನು ಸಹ ದೆಹಲಿಗೆ ಹೋಗ್ತಿದ್ದೇನೆ. ಹೈಕಮಾಂಡ್ ಯಾವ ತೀರ್ಮಾನ ಕೈಗೊಳ್ತಾರೆ ನೋಡೋಣ ಎಂದರು.(ದಿಗ್ವಿಜಯ ನ್ಯೂಸ್​)
ಸಿದ್ದರಾಮಯ್ಯ, ಡಿಕೆಶಿ ಜತೆಗೆ ಸಿಎಂ ರೇಸ್​ನಲ್ಲಿ ಮತ್ತೊಂದು ಹೆಸರು: 25ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಒತ್ತಾಯ

ಶಿವಮೊಗ್ಗದಲ್ಲಿ ಹಣಕ್ಕಾಗಿ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು: 20 ಲಕ್ಷ ರೂ.ಗೆ ಬೇಡಿಕೆ

ಹುಸಿಯಾದ ನಿರೀಕ್ಷೆ: ಸಂಸದೆ ಸುಮಲತಾಗೆ ಶುರುವಾಯ್ತು ರಾಜಕೀಯ ಭವಿಷ್ಯದ ಭಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + nineteen =
Remember me
