ಬೆಂಗಳೂರು:ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದ್ದು ಎಲ್ಲರಿಗೂ ಆಶ್ಚರ್ಯಕ್ಕೆ ಈಡು ಮಾಡಿದೆ. ಮೃತರನ್ನು ರವಿ ಅಲಿಯಾಸ್ ಮತ್ತಿರವಿ (42) ಎಂದು ಗುರುತಿಸಲಾಗಿದ್ದು ಇವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು.
ಈ ಘಟನೆ ಲಗ್ಗೆರೆ ಬಳಿಯ ಚೌಡೇಶ್ವರಿನಗರದ ಹಳ್ಳಿರುಚಿ ಹೊಟೇಲ್ ಮುಂಭಾಗದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಸಿಎಂಹೆಚ್ ಬಾರ್ ಬಳಿಯಿಂದ ರವಿಯನ್ನ ಅಟ್ಟಾಡಿಸಿದ ಕಿರಾತಕರು ಹಲ್ಲೆ ನಡೆಸಿದ್ದಾರೆ. ನಂತರ ಅವರು ಹಳ್ಳಿರುಚಿ ಹೊಟೇಲ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿದ್ದು ಕೊನೆಗೆ ತಲೆಯ ಮೇಲೆ ಸೈಜ್ ಕಲ್ಲನ್ನು ಎತ್ತಿಹಾಕಿ ಕೊಲೆ ಮಾಡಿದ್ದಾರೆ.

ಬೈಕ್ ಗಳಲ್ಲಿ ಬಂದ ಐದಾರು ಮಂದಿಯಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು ಇವರು ಹತ್ಯೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ಪ್ಲೆಕ್ಸ್ ನಲ್ಲಿ ರವಿಕುಮಾರ್ ಪೋಟೋ ಹರಿದು ಹಾಕಿದ್ದರು. ವೃತ್ತಿಯಲ್ಲಿ ಟೆಂಪೋ ಟ್ರಾವೆಲ್ಲರ್ ಚಾಲಕನಾಗಿದ್ದ ರವಿ ಇಂದು ಸಂಜೆ ಕೆಲಸ ಮುಗಿಸಿ ಮನೆ ಹತ್ತಿರ ಬಂದಿದ್ದರು. ಮನೆಯಿಂದ ಹೊರ ಬರುತ್ತಿದ್ದಂತೆಯೆ ಹಂತಕರು ದಾಳಿ ಮಾಡಿದ್ದಾರೆ. ತಪ್ಪಿಸಿಕೊಳ್ಳೋ ಭರದಲ್ಲಿ ಓಡಿದ ರವಿಯನ್ನು ಈ ಕಿರಾಕರು ಅಟ್ಟಾಡಿಸಿ ಹತ್ಯೆ ಮಾಡಿದ್ದಾರೆ.

ಸ್ಥಳಕ್ಕೆ ಬಂದ ನಂದಿನಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶವವನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eleven =
Remember me
