ಬೆಂಗಳೂರು:ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವ ರಾಜ್ಯಪಾಲ ನಡೆಯ ವಿರುದ್ಧ ಸೋಮವಾರ (ಆ. 19) ರಾಜ್ಯ ವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ರಾಷ್ಟ್ರಪತಿಗಳಿಗೆ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ” ಎಂದರು.
“ಪ್ರಕರಣ ಅಲ್ಲದಿದ್ದರೂ ಸಹ ಇದನ್ನು ಬೇಕಂತಲೇ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ಎಂದು ಮುಖಂಡರಿಗೆ ತಿಳಿಸಿದ್ದೇವೆ. ಕಿಡಿಗೇಡಿಗಳು ಒಳನುಸುಳಿ ಗಲಭೆ ಎಬ್ಬಿಸಿ ಕಲ್ಲು ಎಸೆಯುವ ಕೆಲಸ ಮಾಡಬಹುದು ಇದರ ಬಗ್ಗೆಯೂ ಎಚ್ಚರದಿಂದ ಇರಿ ಎಂದು ಸೂಚನೆ ನೀಡಿದ್ದೇವೆ. ನಮ್ಮದು ಗಾಂಧಿ ಮಾರ್ಗದ ಶಾಂತಿಯುತ ಪ್ರತಿಭಟನೆ” ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಭೇಟಿಯ ಬಗ್ಗೆ ಪ್ರಶ್ನಿಸಿದಾಗ “ಪ್ರಸ್ತುತ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಹಾಗೂ ಸಂದರ್ಭದ ಬಗ್ಗೆ ಅವರಿಗೆ ವಿವರಣೆ ನೀಡಿದ್ದೇವೆ” ಎಂದು ತಿಳಿಸಿದರು. ರಾಷ್ಟ್ರ ವ್ಯಾಪಿ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ “ಇದರ ಬಗ್ಗೆ ಗೊತ್ತಿಲ್ಲ, ಇದನ್ನು ಎಐಸಿಸಿ ನಿರ್ಧಾರ ಮಾಡುತ್ತದೆ” ಎಂದರು.
ತುಂಗಭದ್ರಾ ಗೇಟ್ ಅಳವಡಿಕೆಯ ಬಗ್ಗೆ ಕೇಳಿದಾಗ “ಗೇಟ್ ಅಳವಡಿಕೆ ಯಶಸ್ವಿಯಾಗಿ ನೆರವೇರಿದೆ. ಅವಘಡ ಸಂಭವಿಸಿದಾಗ ಕಾರಜೋಳ, ಬೊಮ್ಮಾಯಿ, ವಿಜಯೇಂದ್ರ, ಅಶೋಕ್ ಹಾಗೂ ಕುಮಾರಸ್ವಾಮಿ ಸೇರಿದಂತೆ ಅನೇಕರು ಟೀಕೆಗಳನ್ನು ಮಾಡಿದ್ದರು. ಅವರ ಟೀಕೆಗಳು ಸತ್ತು ಹೋದವು, ಆದರೆ ನಮ್ಮ ಕೆಲಸ ಮಾತ್ರ ಉಳಿಯಿತು. ಅದಕ್ಕೆ ನಾನು ಯಾವಾಗಲು ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂದು ಹೇಳುತ್ತಿರುತ್ತೇನೆ. ಅಣೆಕಟ್ಟಿನ ಗೇಟ್ ದುರಸ್ತಿ ಮಾಡುವಲ್ಲಿ ಶ್ರಮಿಸಿದ ಎಲ್ಲರಿಗೂ ಸರ್ಕಾರ ಗೌರವ ಸಲ್ಲಿಸಲಿದೆ” ಎಂದು ಹೇಳಿದರು.
9 ಐಷಾರಾಮಿ ಕಾರುಗಳ ಮಾಲೀಕ ಈ ಪೌರ ಕಾರ್ಮಿಕ! ಈತನ ಹಿನ್ನೆಲೆ ತಿಳಿದು ಅಧಿಕಾರಿಗಳೇ ಶಾಕ್​

ಅಮೆರಿಕದಲ್ಲಿ ಭೀಕರ ಕಾರು ಅಪಘಾತ: ಒಂದೇ ಕುಟುಂಬದ ಮೂವರು ಭಾರತೀಯರ ಸಾವು, 14 ವರ್ಷದ ಮಗ ಅನಾಥ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × one =
Remember me
