ಬೆಂಗಳೂರು:ಇಂದು ಕಾಂಗ್ರೆಸ್​ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬಿಜೆಪಿಯಿಂದ ಪ್ರಜಾಪ್ರಭುತ್ವ, ಸಂವಿಧಾನಗಳು ನಾಶವಾಗುತ್ತಿವೆ ಎಂದು ಆರೋಪಿಸಿದ ಅವರು, ಸಂವಿಧಾನ ರಕ್ಷಿಸಿ..ಪ್ರಜಾಪ್ರಭುತ್ವ ಉಳಿಸಿ ಎಂದು ಘೋಷವಾಕ್ಯ ಕೂಗುತ್ತ ಮೆರವಣಿಗೆ ಸಾಗಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಹಿರಿಯನಾಯಕರಾದ ಮಲ್ಲಿಕಾರ್ಜುನ್​ ಖರ್ಗೆ, ಬಿ.ಕೆ.ಹರಿಪ್ರಸಾದ್ ಸೇರಿ ಹಲವು ನಾಯಕರು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ಹೊರಟಿದ್ದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ಮಾರ್ಗಮಧ್ಯೆಯೇ ತಡೆದರು. ಪೊಲೀಸರ ಜತೆಗೂ ಮಾತಿನ ಚಕಮಕಿ ನಡೆಸಿದ ಅವರು, ಮಧ್ಯರಸ್ತೆಯಲ್ಲೇ ಪ್ರತಿಭಟನೆಗೆ ಕುಳಿತರು. ಸಿದ್ದರಾಮಯ್ಯನವರು ಪೊಲೀಸರಿಗೆ ಆವಾಜ್​ ಕೂಡ ಹಾಕಿದರು.
ಎಷ್ಟೇ ಕೇಳಿಕೊಂಡರೂ ಪೊಲೀಸರು ಬಿಡದಾಗ, ಡಿ.ಕೆ.ಶಿವಕುಮಾರ್ ಅವರು ರಸ್ತೆಯಲ್ಲೇ ಭಾಷಣ ಶುರು ಮಾಡಿಕೊಂಡರು. ಬಿಜೆಪಿಯವರು ಮಧ್ಯಪ್ರದೇಶ ಸರ್ಕಾರವನ್ನು ಬೀಳಿಸಲು ರಾಜ್ಯಪಾಲರನ್ನು ಬಳಸಿಕೊಂಡರು. ಇದೀಗ ರಾಜಸ್ಥಾನ ಸರ್ಕಾರವನ್ನೂ ಕೆಡವಲು ಯತ್ನಿಸುತ್ತಿದ್ದಾರೆ. ಅದನ್ನೆಲ್ಲ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ಸಿಎಂ ಯಡಿಯೂರಪ್ಪ ಪೊಲೀಸರಿಗೆ ಸೂಚನೆ ಕೊಟ್ಟಿದ್ದಾರೆ. ಹಾಗಾಗಿಯೇ ಪೊಲೀಸರು ನಮ್ಮನ್ನು ರಾಜಭವನಕ್ಕೆ ಬಿಡುತ್ತಿಲ್ಲ. ನಾವು ಗಲಾಟೆ ಮಾಡುವುದಿಲ್ಲ ಎಂದು ಹೇಳಿದರೂ ಕೇಳುತ್ತಿಲ್ಲ ಎಂದು ಆರೋಪಿಸಿದರು.ನಾವು ತಪ್ಪು ಮಾಡಿದರೆ ನಮ್ಮನ್ನು ಬಂಧಿಸಿ. ಕಾನೂನಿಗೆ ವಿರುದ್ಧವಾಗಿ ಹೋಗುವುದಿಲ್ಲ. ಅಧಿಕಾರವಿದೆ ಎಂದ ಮಾತ್ರಕ್ಕೆ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಬೇಡಿ ಎಂದು ಬಿಜೆಪಿಗೆ ಹೇಳುವುದಷ್ಟೇ ನಮ್ಮ ಉದ್ದೇಶ. ನಮ್ಮ ಧ್ವನಿ ಅಡಗಿಸಲು ಸಾಧ್ಯವೇ ಇಲ್ಲ. ಹೋರಾಟ ನಿರಂತರ ಎಂದು ಹೇಳಿದರು.ಇದನ್ನೂ ಓದಿ:ಶತ್ರುಗಳ ಎದೆಯಲ್ಲಿ ಶುರುವಾಯ್ತು ನಡುಕ; ಫ್ರಾನ್ಸ್​ನಿಂದ ಟೇಕ್​ಆಫ್​ ಆಯ್ತು ರಫೇಲ್​…!
ಅದಾದ ಬಳಿಕ ಸಿದ್ದರಾಮಯ್ಯ ಕೂಡ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರಜಾಪ್ರಭುತ್ವದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಚುನಾಯಿತ ಸರ್ಕಾರಗಳನ್ನು ಕೆಡವಿ ಅಧಿಕಾರಕ್ಕೆ ಬರುತ್ತಿದ್ದಾರೆ ಎಂದು ಆರೋಪ ಮಾಡಿದರು.
ಸಿಎಂ ಯಡಿಯೂರಪ್ಪನವರು ನಾವು ಕೊವಿಡ್​-19 ವಿರುದ್ಧ ಹೋರಾಟಕ್ಕೆ ಸಹಕಾರ ನೀಡುತ್ತಿಲ್ಲ ಎನ್ನುತ್ತಿದ್ದಾರೆ. ಆದರೆ ಖಂಡಿತ ನಮ್ಮ ಸಹಕಾರ ಇದೆ. ಭ್ರಷ್ಟಾಚಾರಕ್ಕೆ ಯಾವ ಕಾರಣಕ್ಕೂ ಸಪೋರ್ಟ್​ ಮಾಡುವುದಿಲ್ಲ ಎಂದು ಹೇಳಿದರು.ಸಾಮಾಜಿಕ ಅಂತರ ಮಾಯ
ಕಾಂಗ್ರೆಸ್​ ನಾಯಕರು ಕರೊನಾ ಇರುವುದನ್ನೂ ಮರೆತು ಪ್ರತಿಭಟನೆ ನಡೆಸಿದರು. ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಿಲ್ಲ. ರಾಜಭವನಕ್ಕೆ ಮೆರವಣಿಗೆ ತೆರಳಲು ಅವಕಾಶ ಸಿಗದ ಹಿನ್ನೆಲೆ, ಇಂದು ಸಂಜೆ ಕಾಂಗ್ರೆಸ್​ ನಿಯೋಗವೊಂದು ರಾಜ್ಯಪಾಲರನ್ನು ಭೇಟಿ ಮಾಡಲಿದೆ. (ದಿಗ್ವಿಜಯ ನ್ಯೂಸ್​)
ರಾಜಸ್ಥಾನ ರಾಜಕೀಯ: ಸುಪ್ರೀಂಕೋರ್ಟ್‌ನಿಂದ ಅರ್ಜಿ ಹಿಂಪಡೆದ ಸ್ಪೀಕರ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − two =
Remember me
