
ಬೆಂಗಳೂರು:ಸಂಸತ್ ಕಲಾಪದಿಂದ ವಿರೋಧ ಪಕ್ಷದ ಸದಸ್ಯರ ಅಮಾನತು ಮಾಡಿರುವುದನ್ನು ಖಂಡಿಸಿನಗರ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ದಿಕ್ಕಾರದ ೋಷಣೆಗಳನ್ನು ಮೊಳಗಿದವು.ಸಂವಿಧಾನ ವಿರೋಧಿ ಬಿಜೆಪಿ ತೊಲಗಿಸಿ, ಪ್ರಜಾಪ್ರಭುತ್ವ ಉಳಿಸಿ, ಸರ್ವಾಧಿಕಾರಿ ನರೆಂದ್ರ ಮೋದಿ, ನ್ಯಾಯ ಕೇಳಿದ ಸಂಸದರಿಗೆ ಹಿಟ್ಲರ್ ಬಿಜೆಪಿ ಸರ್ಕಾರದಿಂದ ಅನ್ಯಾಯ, ದಾಳಿಕೋರರಿಗೆ ಪಾಸ್ ಪೇಪರ್ ಸಿಂಹ ಅರ್ಹ, ದಾಳಿ ಪ್ರಶ್ನೆ ಮಾಡಿದ ಸಂಸದರು ಅನರ್ಹ, ಹಿಟ್ಲರ್ ಆಡಳಿತಕ್ಕೆ ದಿಕ್ಕಾರ ಎಂಭಿತ್ಯಾಧಿ ಭಿತ್ತಪತ್ರಗಳನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು.ದೇಶದ ಸಂಸತ್ತಿನ ಮೇಲೆ ನಡೆದ ದಾಳಿ ಬಗ್ಗೆ ಪ್ರಧಾನಮಂತ್ರಿಗಳು ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಿರುವ ಬಗ್ಗೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರಜಾಪ್ರಭುತ್ವ ಹಾಗೂ ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫ್ಯಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಪ್ರಶ್ನಿಸಿದ ಸಂಸದರನ್ನು ಅಮಾನತ್ತು ಮಾಡಿರುವುದು ಖಂಡನೀಯ ಎಂದರು.ಸಲಾಯಿತು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದವರನ್ನು ಅಮಾನತು ಮಾಡಿರುವುದು ಯಾವ ನ್ಯಾಯ ಎಂದು ಕೇಳಿದರು.ನೂತನ ಸಂಸತ್ ಭವನದಲ್ಲಿ ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿ ಖಂಡಿಸಿ ಸಂಸತ್ ಆವರಣದ ಮಹಾತ್ಮ ಗಾಂಧಿ ಅವರ ಪ್ರತಿಮೆ ಮುಂದೆ ನಮ್ಮ ಸಂಸತ್ ಸದಸ್ಯರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದರು.ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ, ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ ಎಂದು ಎಚ್ಚರಿಕೆ ನೀಡಿದರು.ಬಿಜೆಪಿಯ ಸರ್ವಾಧಿಕಾರಿ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ನಮ್ಮ ರಾಜ್ಯದಲ್ಲಿ, ಜನರ ಸಮಸ್ಯೆ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡಿ ಎಂದರೆ ವಿರೋಧ ಪಕ್ಷದ ನಾಯಕರು ಚರ್ಚೆ ಮಾಡಲಿಲ್ಲ. ಕೊನೆಯ ದಿನ ಅವರು ಹೊರಗೆ ಪ್ರತಿಭಟನೆ ಮಾಡಿದರು ಎಂದರು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಶೇ.98 ರಷ್ಟು ಫಲಾನುಭವಿಗಳಿಗೆ ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಈ ವಿಷಯವನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಹೇಳಿದರು.ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಶಾಸಕ ಪ್ರಸಾದ್ ಅಬ್ಬಯ್ಯ, ಎಂಎಲ್ಸಿ ಯು ಬಿ ವೆಂಕಟೇಶ್, ಮಾಜಿ ಸಂಸದ ಉಗ್ರಪ್ಪ, ಮಾಜಿ ಮೇಯರ್ ಹುಚ್ಚಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nineteen =
Remember me
