ಬೆಂಗಳೂರು:ಬುಧವಾರ ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಇದೀಗ ರಾಜ್ಯ ಕಾಂಗ್ರೆಸ್​ ತೀವ್ರ ವಾಗ್ದಾಳಿ ನಡೆಸಿದೆ.
ಇದನ್ನೂ ಓದಿ:ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದು ಅಗತ್ಯ: ಬಿ ಬಿ ಪಾಟೀಲ
ನಿನ್ನೆಯಷ್ಟೇ ಇದೇ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೊಡಗಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರತಾಪ್ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಮಡಿಕೇರಿಯ ವಿರಾಜಪೇಟೆಯಲ್ಲಿ ಪ್ರತಾಪ್ ಸಿಂಹ ಅವರ ಪ್ರತಿಕೃತಿ ಸುಟ್ಟು ಹಾಕಿದ ಕಾಂಗ್ರೆಸ್ ಕಾರ್ಯಕರ್ತರು, ಭದ್ರತಾ ಲೋಪಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ಆರೋಪಿಸಿದರು.
ಇದೀಗ ಈ ಕುರಿತಂತೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, “ಸಂಸತ್ ದಾಳಿಕೋರರಿಗೆ ಸಂಸದ ಪ್ರತಾಪ್ ಸಿಂಹ ಮೂರು ಬಾರಿ ಸಂಸತ್ ಪಾಸ್ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಪರಿಚಯ, ಆತ್ಮೀಯ ಒಡನಾಟ ಇಲ್ಲದಿದ್ದರೆ ಮೂರು ಬಾರಿ ಪಾಸ್ ವಿತರಿಸಲು ಸಾಧ್ಯವೇ ಇಲ್ಲ. ಪ್ರತಾಪ್ ಅವರಿಗೂ ದಾಳಿಕೋರರಿಗೂ ಇರುವ ನಿಗೂಢ ಸಂಬಂಧದ ಬಗ್ಗೆ ತನಿಖೆ ಮಾಡದಿರುವುದೇಕೆ?” ಎಂದು ಪ್ರಶ್ನಿಸಿದೆ.
ಇದನ್ನೂ ಓದಿ:ಪುಟಿನ್​​​ಗೆ ಪ್ರಶ್ನೆ ಕೇಳಿದ ಪುಟಿನ್! ತದ್ರೂಪಿಯನ್ನು ನೋಡಿ ರಷ್ಯಾ ಅಧ್ಯಕ್ಷ ಶಾಕ್​,​ ಅಸಲಿಗೆ ನಡೆದಿದ್ದೇನು?
“ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ? ದಾಳಿಕೋರರ ಮೇಲೆ UAPAಯಂತಹ ಗಂಭೀರ ಪ್ರಕಾರಣ ದಾಖಲಿಸಲಾಗಿದೆ. ಅಪರಾಧಕ್ಕೆ ಸಹಕಾರ ನೀಡಿದವರನ್ನೂ ತನಿಖೆಗೆ ಒಳಪಡಿಸುವುದು ಸಹಜ ಕಾನೂನು ಪ್ರಕ್ರಿಯೆ. ಇಂತಹ ಸಹಜ ಕಾನೂನು ಪ್ರಕ್ರಿಯೆಯನ್ನೂ ಮಾಡದೆ ಪ್ರತಾಪ್ ಸಿಂಹ ರಕ್ಷಣೆಗೆ ನಿಂತಿರುವುದೇಕೆ? ಕೇವಲ ಭದ್ರತಾ ಲೋಪ ಎನ್ನುವುದನ್ನು ಬಿಂಬಿಸಿ ಕೈ ತೊಳೆದುಕೊಳ್ಳಲು ಹೊರಟಿರುವುದೇಕೆ ಕೇಂದ್ರ ಸರ್ಕಾರ?” ಎಂದು ಟ್ವೀಟ್ ಮುಖೇನ ಪ್ರಶ್ನಿಸಿದೆ.
ಸಂಸತ್ ದಾಳಿಕೋರರಿಗೆ ಸಂಸದ ಪ್ರತಾಪ್ ಸಿಂಹ ಮೂರು ಬಾರಿ ಸಂಸತ್ ಪಾಸ್ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.ಪರಿಚಯ, ಆತ್ಮೀಯ ಒಡನಾಟ ಇಲ್ಲದೆ ಇದ್ದರೆ ಮೂರು ಬಾರಿ ಪಾಸ್ ವಿತರಿಸಲು ಸಾಧ್ಯವೇ ಇಲ್ಲ.@mepratapಅವರಿಗೂ ದಾಳಿಕೋರರಿಗೂ ಇರುವ ನಿಗೂಢ ಸಂಬಂಧದ ಬಗ್ಗೆ ತನಿಖೆ ಮಾಡದಿರುವುದೇಕೆ?ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ?…— Karnataka Congress (@INCKarnataka)December 15, 2023
ಸಂಸತ್ ದಾಳಿಕೋರರಿಗೆ ಸಂಸದ ಪ್ರತಾಪ್ ಸಿಂಹ ಮೂರು ಬಾರಿ ಸಂಸತ್ ಪಾಸ್ ನೀಡಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.ಪರಿಚಯ, ಆತ್ಮೀಯ ಒಡನಾಟ ಇಲ್ಲದೆ ಇದ್ದರೆ ಮೂರು ಬಾರಿ ಪಾಸ್ ವಿತರಿಸಲು ಸಾಧ್ಯವೇ ಇಲ್ಲ.@mepratapಅವರಿಗೂ ದಾಳಿಕೋರರಿಗೂ ಇರುವ ನಿಗೂಢ ಸಂಬಂಧದ ಬಗ್ಗೆ ತನಿಖೆ ಮಾಡದಿರುವುದೇಕೆ?ಪ್ರತಾಪ್ ಸಿಂಹ ಅಡಗಿ ಕುಳಿತಿರುವುದೇಕೆ?…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − 2 =
Remember me
