ಬೆಂಗಳೂರು:ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ. ವಿಧಾನ ಮಂಡಲದೊಳಗೆ ಸರ್ಕಾರದ ವಿರುದ್ಧ ಹೋರಾಟ ಮಾಡಲು ಇರುವ ವಿಷಯಗಳನ್ನು ಹೇಗೆ ಪ್ರಸ್ತುತಪಡಿಸಬೇಕು, ಹೋರಾಟ ಹೇಗಿರಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಕೈ ನಾಯಕರು ಸ್ಪಷ್ಟ ತಂತ್ರ ರೂಪಿಸಿದ್ದಾರೆ.
ಬುಧವಾರ ಖಾಸಗಿ ಹೋಟೆಲ್‌ನಲ್ಲಿ ಕರೆಯಲಾಗಿದ್ದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವು ನಾಯಕರು ಹೋರಾಟದ ಸ್ವರೂಪದ ಬಗ್ಗೆ ಶಾಸಕರಿಗೆ ಮಾರ್ಗದರ್ಶನ ಮಾಡಿದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯ ಮತ್ತು ಕರೊನಾ ಸೋಂಕಿನಿಂದ ಉಂಟಾಗಿರುವ ಪರಿಣಾಮ, ವೈದ್ಯಕೀಯ ಉಪಕರಣ ಖರೀದಿಯಲ್ಲಿ ಆಗಿರುವ ಅವ್ಯವಹಾರ, ದೇವರ ಜೀವನಹಳ್ಳಿ ಗಲಭೆ ಘಟನೆ, ಡ್ರಗ್ಸ್ ಪ್ರಕರಣ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಆರ್ಥಿಕ ಕುಸಿತದ ಬಗ್ಗೆ ನಿಲುವಳಿ ಸೂಚನೆ ಮಂಡಿಸಲು ನಿರ್ಧರಿಸಲಾಗಿದೆ.ಇದನ್ನೂ ಓದಿ:ಸಿಸಿಬಿ ಅಧಿಕಾರಿಗಳ ಎದುರು ಎಲ್ಲವನ್ನೂ ಒಪ್ಪಿಕೊಂಡ ದಿಗಂತ್​-ಐಂದ್ರಿತಾ ರೈ
ಪ್ರಾಸ್ತಾವಿಕ ಭಾಷಣ ಮಾಡಿದ ಸಿದ್ದರಾಮಯ್ಯ ಅವರು, ಸದನದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಬೇಕಾದ ವಿಷಯಗಳು ಹಾಗೂ ಅನುಸರಿಸಬೇಕಾದ ನಿಲವುಗಳ ಬಗ್ಗೆ ಸದಸ್ಯರಿಗೆ ವಿವರಿಸಿದರು. ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರವಾಗಿದೆ. ಈ ಬಗ್ಗೆ ಪಕ್ಷದ ವತಿಯಿಂದ ಈಗಾಗಲೇ ಹೋರಾಟ ಕೈಗೆತ್ತಿಕೊಳ್ಳಲಾಗಿದೆ. ಸದನದಲ್ಲಿಯೂ ಈ ಬಗ್ಗೆ ಪ್ರಸ್ತಾಪ ಮಾಡಬೇಕಿದೆ ಎಂದು ಹೇಳಿದರು.
ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್. ಆರ್ ಪಾಟೀಲ್ ಇತರ ಮುಖಂಡರು ಇದ್ದರು.
ರಾಗಿಣಿಗಾಗಿ ಪಾಲಕರು ತಂದ ಬಟ್ಟೆಯನ್ನು ದೇವಸ್ಥಾನದ ಎದುರು ಇಟ್ಟ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
