ಬೆಂಗಳೂರು:ಸರ್ಕಾರ, ಪಕ್ಷದ ಸಂಘಟನೆ, ಅಧಿಕಾರ ಕುರಿತು ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ಖಡಕ್ ಫರ್ಮಾನು ಹೊರಡಿಸಿದೆ.
ಅಧಿಕಾರ ಹಂಚಿಕೆ, ಜಾತಿ ಆಧಾರದಲ್ಲಿ ಡಿಸಿಎಂ ಹುದ್ದೆಗಳ ಸೃಷ್ಟಿ, ಸಚಿವ ಸಂಪುಟ ಪುನಾರಚನೆ ಸೇರಿ ವಿವಿಧ ವಿಚಾರಗಳ ಬಗ್ಗೆ ಆಡಳಿತ ಪಕ್ಷದ ಮುಖಂಡರೇ ಪದೇಪದೆ ಮಾತನಾಡುತ್ತಿರುವುದರಿಂದ ಸರ್ಕಾರದ ವರ್ಚಸ್ಸಿಗೆ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಹೈಕಮಾಂಡ್ ಮುಂದಾಗಿದೆ.
ಹೈಕಮಾಂಡ್ ಪ್ರತಿನಿಧಿಗಳಾಗಿ ಬೆಂಗಳೂರಿಗೆ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್​ಸಿಂಗ್ ಸುರ್ಜೆವಾಲಾ ಹಾಗೂ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬುಧವಾರ ಪಕ್ಷದ ಪ್ರಮುಖರು, ಸಚಿವರ ಸಭೆ ನಡೆಸಿ ಕೆಲವು ಸೂಚನೆಗಳನ್ನು ನೀಡಿದ್ದಾರೆ. ಹದಿನೈದು ದಿನಗಳ ಹಿಂದಷ್ಟೇ ವೇಣುಗೋಪಾಲ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಎಚ್ಚರಿಕೆ ಸಂದೇಶ ನೀಡಿದ ಬಳಿಕವೂ ಪಕ್ಷದ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಇದನ್ನು ತಪ್ಪಿಸಲು ಸಭೆ ನಡೆಸಿ ಪಕ್ಷದ ಸಚಿವರು ಹಾಗೂ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೆವಾಲ, ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ ಬಗ್ಗೆ ಯೋಚಿಸಬೇಕು. ಸಚಿವರು ತಮ್ಮ ಇಲಾಖೆ ಹಾಗೂ ಉಸ್ತುವಾರಿ ಜಿಲ್ಲೆಗಳ ಬಗ್ಗೆ ಗಮನಹರಿಸಬೇಕು. ಅಧಿಕಾರ ಹಂಚಿಕೆ ಸೇರಿ ಇತರ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಆ ರೀತಿ ಮಾತನಾಡುವುದು ಪಕ್ಷದ ಶಿಸ್ತು ಉಲ್ಲಂಘಿಸಿದಂತಾಗುತ್ತದೆ ಎಂದರು. ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಜನರು ಸಂತೋಷವಾಗಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ನಮಗೆ ಗೆಲುವು ನಿಶ್ಚಿತವಾಗಿದೆ. ಗ್ಯಾರಂಟಿ ಯೋಜನೆಗಳನ್ನು ತಳಮಟ್ಟದಲ್ಲಿ ಪರಿಣಾಮಕಾರಿ ಜಾರಿ ಮಾಡಿ ಜನರಿಗೆ ತಲುಪಿಸಲು ನಿರಂತರವಾಗಿ ನಾವು ಪರಿಶೀಲನೆ ಮಾಡುತ್ತೇವೆ. ಈ ಯೋಜನೆಗಳ ಜಾರಿಗೆ ಎಲ್ಲೇ ತೊಂದರೆ ಆದರೂ ಅದಕ್ಕೆ ಸಂಬಂಧಿಸಿದ ಸಚಿವರು ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು. ಪಕ್ಷದ ಸಂಘಟನೆ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಚರ್ಚೆ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗುವುದು. ಹಾಲಿ ಪದಾಧಿಕಾರಿಗಳ ಪೈಕಿ ಹಲವರು ಶಾಸಕರು, ಸಚಿವರುಗಳಾಗಿದ್ದಾರೆ. ಅವರಿಗೆ ಸಂಘಟನಾ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕಿದೆ. ಯುವಕರು, ಹೊಸಬರಿಗೆ ಸಂಘಟನೆಯ ಜವಾಬ್ದಾರಿ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅಶಿಸ್ತಿನ ಹೇಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಇರಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ವಿಪ್ ಜಾರಿ ಮಾಡಬೇಕಾಗುತ್ತದೆ. ಶಾಸಕರು ತಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷರು ಅಥವಾ ನನ್ನ ಬಳಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕೇ ಹೊರತು ಸಾರ್ವಜನಿಕವಾಗಿ ಅಲ್ಲ.
| ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ
ಬಹುತೇಕ ಶಾಸಕರು, ಜನರ ಬಯಕೆ 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು ಎನ್ನುವುದಾಗಿದೆ. ಇದನ್ನು ನಾವೆಲ್ಲರೂ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದರೆ ಸಂತೋಷ ಪಡುವವರಲ್ಲಿ ನಾನೂ ಒಬ್ಬ.
| ಕೆ.ಎನ್.ರಾಜಣ್ಣ, ಸಚಿವ
17ರ ಬಳಿಕ ನಿಗಮ ನೇಮಕ ಪ್ರಕ್ರಿಯೆ:ನಿಗಮ-ಮಂಡಳಿ ಗಳಿಗೆ ನೇಮಕ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು. ಈ ವಿಚಾರವಾಗಿ ಇನ್ನು ನಾಲ್ಕೈದು ಸುತ್ತಿನ ಚರ್ಚೆ ನಡೆಯಬೇಕಿದೆ. ಸದ್ಯ ನನಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿದ್ದು, ನ.17ರಂದು ಚುನಾವಣೆ ಪೂರ್ಣಗೊಂಡ ತಕ್ಷಣವೇ ನಾನು ಕರ್ನಾಟಕಕ್ಕೆ ಆಗಮಿಸಿ ನಿಗಮ-ಮಂಡಳಿ ನೇಮಕ ಪ್ರಕ್ರಿಯೆ ಪೂರ್ಣ ಗೊಳಿಸುತ್ತೇವೆ ಎಂದು ಸುರ್ಜೆವಾಲಾ ಹೇಳಿದರು.
15 ದಿನಗಳಲ್ಲಿ ಅಭ್ಯರ್ಥಿ ಆಯ್ಕೆ:ಮುಂಬರುವ ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿ ಆಯ್ಕೆ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಕರ್ನಾಟಕ ಲೋಕಸಭೆ ಚುನಾವಣೆಯ ಕಾಂಗ್ರೆಸ್ ತಂತ್ರಗಾರಿಕೆಯ ಕೇಂದ್ರವಾಗಿದೆ. ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶ್ರಮಿಸುವುದಾಗಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿದ್ದಾರೆ. ಮುಂದಿನ 15 ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲು ತಿಳಿಸಿದ್ದೇವೆ ಎಂದು ಸುರ್ಜೆವಾಲಾ ಹೇಳಿದರು.
ಬೆಂಗಳೂರು:ಸಚಿವ ಜಾರಕಿಹೊಳಿ ಅವರ ಕಷ್ಟ ಸುಖ ಆಲಿಸಲು ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರಿಗೆ ಸೂಚಿಸಿದೆ. ಪಕ್ಷದ ನಾಯಕರ ಮನವೊಲಿಕೆ ನಡುವೆಯೂ ಪ್ರವಾಸ ಹೋಗುತ್ತೇವೆಂದು ಜಾರಕಿಹೊಳಿ ಹೇಳಿಕೆ ನೀಡಿದ್ದರು. ಬುಧವಾರ ಬೆಂಗಳೂರಿಗೆ ಆಗಮಿಸಿದ್ದ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆ.ಸಿ ವೇಣುಗೋಪಾಲ್ ಈ ಬೆಳವಣಿಗೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಜತೆಯೂ ಸಮಾಲೋಚನೆ ನಡೆಸಿದ್ದಾರೆೆ. ಕೊನೆಗೆ ಸತೀಶ್ ಜಾರಕಿಹೊಳಿ ವಿಚಾರವನ್ನು ನಾನು ನಿಭಾಯಿಸುವುದಾಗಿ ಕೆ.ಸಿ ವೇಣುಗೋಪಾಲ್ ಸಭೆಯಲ್ಲಿ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.
ಈ ಸಿಮ್ ದೇಶದಲ್ಲೇ ಮೊದಲು, ಏಕೆಂದರೆ ಇದು ಇ-ಸಿಮ್!; ಇದಿದ್ರೆ ವಿದೇಶ ಪ್ರಯಾಣದಲ್ಲಿ ರೋಮಿಂಗ್ ಸಮಸ್ಯೆಯೇ ಇಲ್ಲ!

ಮಕ್ಕಳಾದರೆ ದಂಡ ಹಾಕಬಾರದು; ಮಕ್ಕಳನ್ನು ಹೊಂದುವುದನ್ನು ಪ್ರೋತ್ಸಾಹಿಸಬೇಕು: ಎಲಾನ್ ಮಸ್ಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
