ಬೆಂಗಳೂರು:ಗಡಿಯಲ್ಲಿ ಚೀನಾ ದಾಳಿಗೆ ತುತ್ತಾಗಿ ಪ್ರಾಣಾರ್ಪಣೆ ಮಾಡಿದ ಭಾರತೀಯ ಯೋಧರಿಗೆ ಕಾಂಗ್ರೆಸ್ ಶುಕ್ರವಾರ ನಮನ ಸಲ್ಲಿಸಿತು.ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ನಸೀರ್ ಅಹ್ಮದ್, ಮಾಜಿ ಸಚಿವ ಕೆ.ಜೆ. ಜಾರ್ಜ್ ಸೇರಿ ಹಲವರು ಹಾಜರಿದ್ದರು. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ದೇಶದ ರಕ್ಷಣೆಗಾಗಿ, ಗಡಿ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಾಗಿ ಸೈನಿಕರ ಪರ ನಿಲ್ಲೋಣ ಎಂದು ಹೇಳಿದರು.
ಸಿದ್ದರಾಮಯ್ಯ ಮಾತನಾಡಿ, ಸೈನಿಕರ ನಡುವೆ ನಡೆದ ಘರ್ಷಣೆಯಲ್ಲಿ ನಮ್ಮ 20 ಸೈನಿಕರು ಮೃತಪಟ್ಟಿದ್ದಾರೆ. ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಆ ಹುತಾತ್ಮರ ಕುಟುಂಬಗಳಿಗೆ ಕಾಂಗ್ರೆಸ್ ಸಾಂತ್ವನ ಹೇಳುತ್ತದೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತದೆ ಎಂದರು.
ಇದನ್ನೂ ಓದಿ:ಅಂತಾರಾಷ್ಟ್ರೀಯ ವಿಮಾನ ಹಾರಾಟ ಜುಲೈ 15 ರ ತನಕ ಇಲ್ಲ
ನರೇಂದ್ರ ಮೋದಿ ಅವರ ರಾಜತಾಂತ್ರಿಕ ವೈಫಲ್ಯದಿಂದ ಸೈನಿಕರನ್ನು ಕಳೆದುಕೊಳ್ಳುವಂತಾಗಿದೆ. ಈಗಲೂ ಚೀನಾದ ಆಕ್ರಮಣವನ್ನು 56 ಇಂಚಿನ ವ್ಯಕ್ತಿತ್ವ (ಮೋದಿ) ನಿರಾಕರಿಸುತ್ತಿದ್ದಾರೆ. ನಮಗೆ ಸೈನಿಕರ ಜೀವ ಮುಖ್ಯವೋ, 56 ಇಂಚಿನ ಹೆಮ್ಮೆ ಮುಖ್ಯವೋ ಎಂದು ಪ್ರಶ್ನಿಸಿದ್ದಾರೆ. ಕರೊನಾ ತಡೆಯುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಹಾಗಾಗಿ ಕರೊನಾ ಸೋಂಕು ಹೆಚ್ಚಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಇಬ್ಬರೂ ಸೋಂಕು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ಉಪ್ಪುನೀರಿನಲ್ಲಿ ಬಾಯಿ ಮುಕ್ಕಳಿಸಿದ್ರೆ ಕರೊನಾ ದೂರಾಗುತ್ತಾ?

Sign in to your account
Please enter an answer in digits:18 − 12 =
Remember me
