ಬೆಂಗಳೂರು:ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್‌ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಾಗಿ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಸುದೀಪ್‌ ಘೋಷಣೆಗೆ ರಾಜ್ಯ ಕಾಂಗ್ರೆಸ್ ‌ವ್ಯಂಗ್ಯವಾಡಿದೆ.
ಇದನ್ನೂ ಓದಿ:VIDEO | ವಿಧಾನಸಭೆಯಲ್ಲಿ ಗದ್ದಲ; ಬಿಜೆಪಿ ಶಾಸಕನನ್ನು ಎತ್ತಿಕೊಂಡು ಹೊರಗೆ ಬಿಟ್ಟ ಮಾರ್ಷಲ್‌ಗಳು!
ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ. ತಮ್ಮ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಮಾಜಿ ಮುಖ್ಯ ಮಂತ್ರಿ ಬಿಎಸ್​​ವೈ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಬಿಜೆಪಿ ನಡೆಗೆ ಕಾಂಗ್ರೆಸ್ ವ್ಯಂಗ್ಯವಾಡಿ ಟ್ವೀಟ್​​ ಮಾಡಿದೆ.
ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ@BSBommaiಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ.
ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ!
BSY ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ!
— Karnataka Congress (@INCKarnataka)April 5, 2023

ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುವೆ ಅಂತಾನೂ ಹೇಳಲಿಲ್ಲ. ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆ ಎಂದಷ್ಟೇ ಹೇಳಿದ್ದಾರೆ.
ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − two =
Remember me
