ಹೊಸಕೋಟೆ:ಶಾಶ್ವತವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಉಳಿಯುವುದು ಕಷ್ಟ ಎಂದಿರುವ ಶಾಸಕ ಶರತ್ ಬಚ್ಚೇಗೌಡ ತನ್ನ ಮುಂದಿನ ನಡೆ ಬಗ್ಗೆ ಮಾಹಿತಿ ನೀಡಿದ್ದಾರೆ.ಎಂಟಿಬಿ ನಾಗರಾಜ್​ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರದ ಬೈ ಎಲೆಕ್ಷನ್​ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲವು ಸಾಧಿಸಿದ್ದ ಶರತ್ ಬಚ್ಚೇಗೌಡ, ಇದೀಗ ರಾಷ್ಟ್ರೀಯ ಪಕ್ಷ ಸೇರಲು ಸಜ್ಜಾಗಿದ್ದಾರೆ.
ಈ ಬಗ್ಗೆ ಹೊಸಕೋಟೆಯಲ್ಲಿ ಬುಧವಾರ ಮಾತನಾಡಿದ ಶರತ್ ಬಚ್ಚೇಗೌಡ, ಶಾಶ್ವತವಾಗಿ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಉಳಿಯುವುದು ಕಷ್ಟ. ನಾನು ರಾಷ್ಟ್ರೀಯ ಪಕ್ಷಕ್ಕೆ ಸೇರುವುದರಲ್ಲಿ ಯಾವುದೇ ಗೊಂದಲವಿಲ್ಲ. ಈ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ತಾಲೂಕು ಮತ್ತು ನಮ್ಮ ಕಾರ್ಯಕರ್ತರ ರಾಜಕೀಯ ಬೆಳವಣಿಗೆಗೆ ರಾಷ್ಟ್ರೀಯ ಪಕ್ಷ ಅವಶ್ಯಕ. ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಪಕ್ಷಕ್ಕೆ ಸೇರುವುದು ಶೇಕಡಾ ನೂರರಷ್ಟು ಖಚಿತ. ಆದರೆ ಇನ್ನೂ ದಿನಾಂಕ ನಿಗದಿ ಆಗಿಲ್ಲ ಎಂದ ಶಾಸಕರು, ತಾಲೂಕಿನಲ್ಲಿ ಕಾಂಗ್ರೆಸ್​ ಸಭೆಗಳನ್ನು ನಡೆಸುತ್ತಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಕಂಡುಬಂದಿಲ್ಲ ಎಂದು ವಿವರಿಸಿದರು.
ಊರಿಗೆ ಊರೇ ಕೊಚ್ಚಿಕೊಂಡು ಹೋದರೂ ಸಾಹೇಬ್ರಿಗೆ ಟೆನ್ಶನ್​ ಇಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 16 =
Remember me
