ಬೆಂಗಳೂರು:ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್​ ಮೌನ ಪ್ರತಿಭಟನೆ ನಡೆಸಿತು.
ಫ್ರೀಡಂ ಪಾರ್ಕ್​ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಸೇರಿದಂತೆ ಸಚಿವರು ಹಾಗೂ ಶಾಸಕರು ಪಾಲ್ಗೊಂಡರು. ಡಿಸಿಎಂ ಡಿಕೆಶಿ ಸೇರಿ ಹಲವರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಿದರೆ, ಮುಖ್ಯಮಂತ್ರ ಸಿದ್ದರಾಮಯ್ಯ ಅವರು ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ನಡೆಸಿದೆ.
ಇದನ್ನೂ ಓದಿ:ಸಂಚರಿಸುತ್ತಿವೆಯಾ ನಿರುಪಯುಕ್ತ ಕೆಎಸ್​ಆರ್​ಟಿಸಿ ಬಸ್​ಗಳು? ವೈರಲ್​ ಆದ ವಿಡಿಯೋದಲ್ಲಿ ಅಧಿಕಾರಿ ಹೇಳಿದ್ದಿಷ್ಟು…
ಪ್ರತಿಭಟನೆಯ ವೇಳೆ ಸಿಎಂ ಸಿದ್ದರಾಮಯ್ಯ ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂದು ಬರೆದಿರುವ ಹಾಗೂ ರಾಹುಲ್​ ಗಾಂಧಿ ಫೋಟೋ ಇರುವ ಭಿತ್ತಿ ಫಲಕವನ್ನು ಪ್ರದರ್ಶಿಸಿದರು.
ಪ್ರತಿಭಟನೆಯಲ್ಲಿ ಸಚಿವರಾದ ಸತೀಶ್​ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೆಜೆ ಜಾರ್ಜ್, ಯು.ಬಿ ವೆಂಕಟೇಶ್, ಸಂತೋಷ್ ಹಾಗೂ ಶಾಸಕ ಪುಟ್ಟರಂಗ ಶೆಟ್ಟಿ, ಆಶೋಕ್ ಪಟ್ಟಣ್, ಪ್ರಕಾಶ್ ಹುಕ್ಕೇರಿ, ಸಲೀಮ್ ಆಹ್ಮದ್ ಭಾಗಿಯಾದರು.
ಅನರ್ಹತೆಯನ್ನು ಪ್ರಶ್ನಿಸಿ ಸೂರತ್​ ನ್ಯಾಯಾಲಯದಲ್ಲಿ ರಾಹುಲ್​ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ಇದಾದ ಬಳಿಕ ರಾಹುಲ್​, ಗುಜರಾತ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಕಳೆದ ಜುಲೈ 7ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ ಸೂರತ್​ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಇದೀಗ ಸುಪ್ರೀಂಕೋರ್ಟ್​ ಮೆಟ್ಟಿಲೇರಲು ರಾಹುಲ್​ ಗಾಂಧಿ ನಿರ್ಧಾರ ಮಾಡಿದ್ದಾರೆ.
2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪ್ರಚಾರ ಮಾಡುವಾಗ ಮಾತನಾಡಿದ್ದ ರಾಹುಲ್​, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
2019ರಲ್ಲಿ ರಾಹುಲ್ ಗಾಂಧಿ ನೀಡಿದ್ದ​ ಹೇಳಿಕೆಯಿಂದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಅಸಮಾಧಾನಗೊಂಡು ದೂರು ದಾಖಲಿಸಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್​ ಗಾಂಧಿ ಅವರನ್ನು ಸೂರತ್​ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಇದರ ಅಡಿಯಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದರೆ, ಮೇಲ್ಮನವಿ ಸಲ್ಲಿಸಲು ರಾಹುಲ್​ ಅವರಿಗೆ ನ್ಯಾಯಾಲಯ ಕಾಲಾವಕಾಶ ನೀಡಿದೆ. ಆದರೆ, ಸಂಸತ್ತಿನ ಕಾರ್ಯದರ್ಶಿ, ರಾಹುಲ್​ ಅವರನ್ನು ಲೋಕಸಭಾ ಸದಸ್ಯತ್ವದಿಂದ ವಜಾಗೊಳಿಸಿದ್ದಾರೆ.
ಇದನ್ನೂ ಓದಿ:ಭಾರೀ ಮಳೆಗೆ ಹಿಮಾಚಲ ಪ್ರದೇಶ ತತ್ತರ: ಡ್ರೋನ್​ ಕ್ಯಾಮೆರಾದಲ್ಲಿ ಪ್ರವಾಹದ ಭಯಾನಕ ದೃಶ್ಯಗಳು ಸೆರೆ!
ಮಾನಹಾನಿ ಪ್ರಕರಣದಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​, 1951ರ ಜನಪ್ರತಿನಿಧಿ ಕಾಯ್ದೆ ಅಡಿಯಲ್ಲಿ 8 ವರ್ಷ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ. ಒಂದು ವೇಳೆ ಸೂರತ್​ ನ್ಯಾಯಾಲಯ ನೀಡಿರುವ ತೀರ್ಪನ್ನು ಉನ್ನತ ನ್ಯಾಯಾಲಯ ವಜಾಗೊಳಿಸಿದರೆ ರಾಹುಲ್​ ನಿರಾಳರಾಗಲಿದ್ದಾರೆ. ಇನ್ನು ರಾಹುಲ್​ರನ್ನು ಅನರ್ಹಗೊಳಿಸಿರುವ ನಿರ್ಧಾರ ಕೇಂದ್ರದ ರಾಜಕೀಯ ದ್ವೇಷ ಎಂದು ಆರೋಪ ಮಾಡಿದ್ದಾರೆ. (ಏಜೆನ್ಸೀಸ್​)
ರಾಹುಲ್​ ಗಾಂಧಿ ಅನರ್ಹತೆ ವಿಚಾರ: ಅಮೆರಿಕ ಕೊಟ್ಟ ಪ್ರತಿಕ್ರಿಯೆ ಹೀಗಿದೆ…

ರಾಹುಲ್​ ಗಾಂಧಿ ಅನರ್ಹ ಪ್ರಕರಣದಲ್ಲಿ ಪ್ರಜಾಪ್ರಭುತ್ವ ತತ್ವಗಳು ಅನ್ವಯಿಸಬೇಕು: ಜರ್ಮನಿ ಅಭಿಪ್ರಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
