ಬೆಂಗಳೂರು:ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ ಎಂದು ಕಾಂಗ್ರೆಸ್​ ವಾಗ್ದಾಳಿ ನಡೆಸಿದೆ.
ಈ ಕುರಿತು ಸರಣಿ ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​ ಘಟಕ ವಿಪಕ್ಷ ನಾಯಕನ ಆಯ್ಕೆ, ಆತ್ಮಾವಲೋಕನ ಸಭೆಯಲ್ಲಿನ ಗದ್ದಲದ ಕುರಿತು ಟ್ವೀಟ್​ ಮಾಡಿ ಬಿಜೆಪಿ ಕಾಲೆಳೆದಿದೆ.
ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಹಾಗೂ ಬಿಎಸ್​ವೈ ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ.
ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ ಎಂದು ಪ್ರಶ್ನಿಸಿದೆ. ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ ಎಂದು ಆತ್ಮಾವಲೋಕನ ಸಭೆ ಕುರಿತು ಟೀಕಿಸಿದೆ.
ಬಿಜೆಪಿಯಲ್ಲಿ ಈಗಸೋಲಿನ ಆತ್ಮಾವಲೋಕನದ ಹೆಸರಲ್ಲಿಸಂತೋಷ ಕೂಟ ಹಾಗೂ BSY ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ!ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯಪಡೆಯನ್ನು ಮುಂದೆ ಬಿಟ್ಟಿರುವುದೇಕೆ@BJP4Karnataka?ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ…
ಇದನ್ನೂ ಓದಿ:ಬಾಕಿ ಹಣ ವಸೂಲಿಗಾಗಿ ವ್ಯಕ್ತಿಯನ್ನು ಅರಬೆತ್ತಲೆಯಾಗಿ ಕೂರಿಸಿದ ಪೆಟ್ರೋಲ್​ ಬಂಕ್​ ಮಾಲೀಕ
ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿ ವ್ಯಂಗ್ಯವಾಡಿದೆ.
ಬಾಯಿ ತೆರೆದರೆ ಹೊಲಸು ಮಾತನಾಡುವ ಬಸನ್​ಗೌಡ ಪಾಟೀಲ್​ ಯತ್ನಾಳ್​, ಆರ್​.ಅಶೋಕ್​ ಅವರಿಗೆ ತಾನೇನು ಮಾತಾಡುತ್ತೇನೆ ಎಂಬ ಅರಿವು ಇರುವುದಿಲ್ಲ, ಮಾಜಿ ಸಚಿವ ಆಶ್ವತ್ಥನಾರಾಯಣ ಅವರಿಗೆ ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ, ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು ಸಿದ್ದರಾಮಯ್ಯರನ್ನು ಎದುರಿಸಲು ಸಾಧ್ಯವೇ ಎಂದು ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನು ಕಾಂಗ್ರೆಸ್​ ಟ್ವೀಟ್​ ಮೂಲಕ ಕುಟುಕಿದೆ.
ಬಿಜೆಪಿಯಲ್ಲಿ ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಇಲ್ಲ!@BasanagoudaBJP– ಬಾಯಿ ತೆರೆದರೆ ಹೊಲಸು ಮಾತುಗಳು.@RAshokaBJP– ತಾನೇನು ಮಾತಾಡುತ್ತೇನೆ ಎಂಬ ಅರಿವು ಅವರಿಗೇ ಇರುವುದಿಲ್ಲ.@drashwathcn– ಸದಾ ಗಂಡಸ್ಥನದ ಬಗ್ಗೆಯೇ ಚಿಂತೆ.@BSBommai– ಪ್ರತಾಪ್ ಸಿಂಹನನ್ನೇ ಎದುರಿಸಲಾಗದವರು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + fourteen =
Remember me
