ಬೆಂಗಳೂರು:ಆಳಂದ ಶಾಸಕ ಬಿ.ಆರ್​.ಪಾಟೀಲ್​ ಹೆಸರಿರುವ ಲೆಟರ್​ಹೆಡ್​ನಲ್ಲಿ ಸಿಎಂಗೆ 30ಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿರುವ ಕುರಿತು ಹೊಸ ಸುದ್ದಿಯೊಂದು ಹೊರ ಬಂದಿದ್ದು, ಇದು ಸುಳ್ಳು ಸುದ್ದಿಯೆಂದು ಸ್ಪಷ್ಟನೆ ನೀಡಲಾಗಿದೆ.
​ಇದರ ಬೆನ್ನಲ್ಲೇ ಟ್ವೀಟ್​ ಮಾಡಿರುವ ಕಾಂಗ್ರೆಸ್​ ಸೋಲಿನ ಹತಾಶೆಯಲ್ಲಿರುವ ವಿಪಕ್ಷಗಳು ಈಗ ತಮ್ಮ ಫೇಕ್ ಫ್ಯಾಕ್ಟರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿವೆ ಎಂದು ಆರೋಪಿಸಿದೆ.
ಗ್ಯಾರಂಟಿಗಳ ಜಾರಿ ಮಾಡಿದ ನಮ್ಮ ಸರ್ಕಾರಕ್ಕೆ ಸಿಗುತ್ತಿರುವ ಜನಮೆಚ್ಚುಗೆಯನ್ನು ಸಹಿಸಲಾಗದೆ ನಕಲಿ ಸೃಷ್ಟಿಯ ಮೊರೆ ಹೋಗಿವೆ ವಿಪಕ್ಷಗಳು. ಶಾಸಕ ಬಿ.ಆರ್​.ಪಾಟೀಲ್​ ಅವರ ಹಳೆಯ ವಿಳಾಸದ ನಕಲಿ ಲೆಟರ್ ಹೆಡ್ ನಲ್ಲಿ ನಕಲಿ ಪತ್ರ ಸೃಷ್ಟಿಸಿದ ಸಾಧನೆ ಮಾಡುತ್ತೇವೆ ಎಂದುಕೊಂಡಿದ್ದರೆ ಅದು ಮೂರ್ಖತನವಾಗುತ್ತದೆ ಎಂದು ಕಿಡಿಕಾರಿದೆ.
ಸೋಲಿನ ಹತಾಶೆಯಲ್ಲಿರುವ ವಿಪಕ್ಷಗಳು ಈಗ ತಮ್ಮ ಫೇಕ್ ಫ್ಯಾಕ್ಟರಿಗಳಿಗೆ ಹೆಚ್ಚಿನ ಕೆಲಸ ಕೊಟ್ಟಿವೆ.ಗ್ಯಾರಂಟಿಗಳ ಜಾರಿ ಮಾಡಿದ ನಮ್ಮ ಸರ್ಕಾರಕ್ಕೆ ಸಿಗುತ್ತಿರುವ ಜನಮೆಚ್ಚುಗೆಯನ್ನು ಸಹಿಸಲಾಗದೆ ನಕಲಿ ಸೃಷ್ಟಿಯ ಮೊರೆ ಹೋಗಿವೆ ವಿಪಕ್ಷಗಳು.ಶಾಸಕ ಬಿ ಆರ್ ಪಾಟೀಲ್ ಅವರ ಹಳೆಯ ವಿಳಾಸದ ನಕಲಿ ಲೆಟರ್ ಹೆಡ್ ನಲ್ಲಿ ನಕಲಿ ಪತ್ರ ಸೃಷ್ಟಿಸಿದ ಸಾಧನೆ…pic.twitter.com/o0avhwoNNB
ಇದನ್ನೂ ಓದಿ:ನಡೆಯುವ ವೇಳೆ ಭುಜ ತಾಕಿಸಿದ್ದಕ್ಕೆ ಹತ್ಯೆ
ಸೋಲಿನ ಹತಾಶೆಯಲ್ಲಿರುವ ಬಿಜೆಪಿ ಫೇಕ್ ಫ್ಯಾಕ್ಟರಿ ಹೊಸ ಹೊಸ ಟೂಲ್ ಕಿಟ್ ತಯಾರು ಮಾಡುತ್ತಿದೆ, ಅದರ ಬಾಗವಾಗಿ “ಉಡುಪಿಯ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ“ ಎಂದು ನಕಲಿ ಸುದ್ದಿಯ ಸ್ಕ್ರಿಪ್ಟ್ ತಯಾರಿಸಿದೆ.
ಯಾವುದೇ ದೂರು ದಾಖಲಾಗದಿದ್ದರೂ ಸುಮೊಟೊ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಯಾವುದೇ ವಿಡಿಯೋ ಚಿತ್ರೀಕರಿಸಿ ಹರಿಬಿಟ್ಟಿರುವುದು ಪತ್ತೆಯಾಗಿಲ್ಲ. ಬಿಜೆಪಿಯ ಫೇಕ್ ಫ್ಯಾಕ್ಟರಿಯ ಸದಸ್ಯೆ ಸೃಷ್ಟಿಸಿದ ಸುಳ್ಳನ್ನೇ ಹಿಡಿದು ಜಗ್ಗಾಡುತ್ತಿರುವ ನಾಯಕರ ಹತಾಶೆಯು ಮಿತಿಮೀರಿ ಕಟ್ಟೆಯೊಡೆದಿರುವುದಕ್ಕೆ ಈ ವಿಷಯವೇ ಸಾಕ್ಷಿ ಎಂದು ತಿರುಗೇಟು ನೀಡಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × 4 =
Remember me
