ಬೆಂಗಳೂರು:ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಕೃಷಿ ಇಲಾಖೆಯ ಅಧಿಕಾರಿಗಳು ಲಂಚ ನೀಡುವಂತೆ ತಮ್ಮನ್ನು ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಪತ್ರ ಬರೆದಿರುವ ಕುರಿತು ಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.
ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​ ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ ಆರ್ ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು. ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ ಎಂದು ಕಿಡಿಕಾರಿದೆ.
ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿಲ್ಲ, ಈ ಪತ್ರದ ಕುರಿತು ಮಾಹಿತಿಯೂ ಮಂಡ್ಯದ ಅಧಿಕಾರಿಗಳಿಗಿಲ್ಲ ಎಂದು ಖಚಿತಪಡಿಸಿದ್ದಾರೆ, ಈ ನಕಲಿ ಪತ್ರಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿದೆ. ಇದರ ಹಿಂದಿರುವುದು ಬಿಜೆಪಿಯ ಫೇಕ್ ಫ್ಯಾಕ್ಟರಿಯೋ ಅಥವಾ ಪೆನ್ ಡ್ರೈವ್ ಶೂರರೋ ಎಂಬುದನ್ನು ಬಯಲಿಗಿಡುತ್ತೇವೆ.
ನಕಲಿ ಪೆನ್ ಡ್ರೈವ್ ಆಯ್ತು,ಶಾಸಕ ಬಿ ಆರ್ ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು,ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು!ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ.ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿಲ್ಲ, ಈ ಪತ್ರದ ಕುರಿತು ಮಾಹಿತಿಯೂ ಮಂಡ್ಯದ…pic.twitter.com/8UyMvHn3Hi
ಇದನ್ನೂ ಓದಿ:ಹೆಂಡತಿ ಮೇಲಿನ ಸಿಟ್ಟಿಗೆ ಮಕ್ಕಳನ್ನು ಬಾವಿಗೆ ತಳ್ಳಿದ ಪತಿ
ರಾಜ್ಯಪಾಲರ ಕಛೇರಿಯನ್ನೇ ಯಮಾರಿಸುವಷ್ಟು ಬಿಜೆಪಿಯ ನಕಲಿ ಪತ್ರಕೋರರು ನಿಷ್ಣಾತರಾಗಿದ್ದಾರೆ. ಈ ಹಿಂದೆ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಬರೆದ ಅಸಲಿ ಪತ್ರದ ಬಗ್ಗೆ ಚಕಾರ ಎತ್ತದ ಬಿಜೆಪಿ ಆತನ ಸಾವಿಗೆ ಕಾರಣವಾಗಿತ್ತು. ನಕಲಿ ಪತ್ರದ ಬಗ್ಗೆ ಪ್ರತಾಪ ತೋರಿಸುವ ಪೆನ್ ಡ್ರೈವ್ ಶೂರರು ಆಗ ಅಸಲಿ ಪತ್ರದ ಬಗ್ಗೆ ತುಟಿ ಬಿಚ್ಚಲಿಲ್ಲ ಏಕೆ ಎಂದು ಪ್ರಶ್ನಿಸಿದೆ.
ಬಿಜೆಪಿ ಅಧಿಕಾರಾವಧಿಯಲ್ಲಿ ಕೃಷಿ ಸಚಿವರಾಗಿದ್ದ ಬಿ.ಸಿ. ಪಾಟೀಲ್ ವಿರುದ್ಧ ಹಫ್ತಾ ವಸೂಲಿಯ ಬಗ್ಗೆ ಅಧಿಕಾರಿಗಳು, ನೌಕರರೇ ಅಸಲಿ ಪತ್ರ ಬರೆದಿದ್ದರು. ನಕಲಿ ಪತ್ರ ಹಿಡಿದು ಜಗ್ಗಾಡುತ್ತಿರುವ ಬಿಜೆಪಿ ತಮ್ಮ ಸಚಿವರ ವಿರುದ್ಧದ ಆರೋಪಗಳಿಗೆ ಕೈಗೊಂಡಿದ್ದ ಕ್ರಮಗಳೇನು. ಆ ಪತ್ರ ಕಸದ ಬುಟ್ಟಿಗೆ ಸೇರಿದ್ದೇಕೆ. ಬಿಜೆಪಿ ಹಾಗೂ ಬಿಜೆಪಿಯ ಬ್ರದರ್ರು ಉತ್ತರಿಸುವರೇ ಎಂದು ಕಾಂಗ್ರೆಸ್​ ವಿಪಕ್ಷಗಳಿಗೆ ಟಾಂಗ್​ ಕೊಟ್ಟಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − three =
Remember me
