ಬೆಂಗಳೂರು:ರಾಜ್ಯ ಬಿಜೆಪಿ(State BJP)ನಾಯಕರಲ್ಲಿ ಮಾತಿನ ಸಮರ ನಡೆಯುತ್ತಿದೆ ಎಂದು ಉಲ್ಲೇಖಿಸಿ ಟ್ವೀಟ್(Tweet)ಮಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ಪ್ರಮುಖ ನಾಯಕರ ಹೆಸರನ್ನು ಬಳಸಿ ಲೇವಡಿ ಮಾಡಿದೆ.
ಇದನ್ನೂ ಓದಿ:ಐವರು ಕಳ್ಳರನ್ನು ಹಿಡಿಯಲು ಹೋಗಿ 1,500ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು!
ಈ ಕುರಿತು ರಾಜ್ಯ ಕಾಂಗ್ರೆಸ್(State Congress)ಮಾಡಿರುವ ಟ್ವೀಟ್ ಹೀಗಿದೆ, “ಬೊಮ್ಮಾಯಿ ವಿರುದ್ಧ ಯತ್ನಾಳ್, ಯತ್ನಾಳ್ ವಿರುದ್ಧ ನಿರಾಣಿ, ಈಶ್ವರಪ್ಪ ವಿರುದ್ಧ ವಲಸಿಗರು, ಪ್ರತಾಪ್ ಸಿಂಹ ವಿರುದ್ಧ ಬೊಮ್ಮಾಯಿ, ಸೋಮಣ್ಣ ವಿರುದ್ಧ ಸಂತೋಷ್, ಸಿ.ಟಿ. ರವಿ ವಿರುದ್ಧ ಬಿಎಸ್​ವೈ” ನಡುವೆ ಜಟಾಪಟಿ ನಡೆಯುತ್ತಿದೆ ಎಂದು ಟ್ವೀಟ್​​ನಲ್ಲಿ ಹೇಳಿದೆ.
“ಬಿಜೆಪಿಯಲ್ಲಿ ಮಾತಿನ ಮಲ್ಲಯುದ್ಧ ನಡೆಯುತ್ತಿದೆ, ಮುಂದೆ ಆರ್​​ಎಸ್​​ಎಸ್​​ನವರ(RSS)ಲಾಠಿ ಕಸಿದುಕೊಂಡು ಬಡಿದಾಡಿಕೊಂಡರೂ ಆಶ್ಚರ್ಯವಿಲ್ಲ. ಚುನಾವಣೆಯ ಸೋಲಿನ ನಂತರ ಮರೆಗೆ ಸರಿದ ಜೋಶಿ-ಸಂತೋಷ್ ಜೋಡಿ ತೆರೆಯ ಹಿಂದೆ ಕುಳಿತು ಆಡಿಸುತ್ತಿರುವ ಗೊಂಬೆಯಾಟ ಇದು” ಎಂದು  ಬಿಜೆಪಿ ನಾಯಕರ ವಿರುದ್ಧ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
