ಬೆಂಗಳೂರು:ಬಿಜೆಪಿ ಕುರಿತು ಸರಣಿ ಟ್ವೀಟ್​​ ಮೂಲಕ ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯ ಶಾಸಕರಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಅರ್ಹ ಶಾಸಕನಿಲ್ಲದೆ ಇರುವುದು ನಾಚಿಕೆಯ ಸಂಗತಿ ಎಂದು ಟ್ವೀಟ್​ ಮಾಡಿದೆ.
ಇದನ್ನೂ ಓದಿ:ಗ್ಯಾರಂಟಿ ಪರಿಣಾಮ ಆರು ತಿಂಗಳಲ್ಲಿ ತಿಳಿಯುತ್ತೆ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿಕೆ
“ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ಟ್ವೀಟ್​ ಮಾಡಿದೆ.
ಇದನ್ನೂ ಓದಿ:ಚುನಾವಣೆಗೋಸ್ಕರ ಕಾಂಗ್ರೆಸ್​​ ಗ್ಯಾರಂಟಿ ಯೋಜನೆ ಘೋಷಿಸಿದ್ದು: ಕೋಟ ಶ್ರೀನಿವಾಸ್ ಪೂಜಾರಿ
“ಬಿಜೆಪಿಗೆ ವಿರೋಧ ಪಕ್ಷದ ನಾಯಕನ ‘ಗ್ಯಾರಂಟಿ’ಯೂ ಇಲ್ಲ. ವಿರೋಧ ಪಕ್ಷದ ನಾಯಕನಿಲ್ಲದೆ ಸದನ ಕಲಾಪ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಈ ಕಪ್ಪು ಚುಕ್ಕೆಯನ್ನಿಟ್ಟಿದ್ದು ಬಿಜೆಪಿ. ವಿರೋಧ ಪಕ್ಷದ ನಾಯಕನ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ? ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ. ಫಿಕ್ಸ್ ಮಾಡಲಾಗಿತ್ತು. ವಿರೋಧ ಪಕ್ಷದ ನಾಯಕನ ಹುದ್ದೆ ಎಷ್ಟಕ್ಕೆ ಬಿಕರಿಯಾಗುತ್ತಿದೆ? ಆ ಚೌಕಾಶಿ ವ್ಯವಹಾರಕ್ಕಾಗಿಯೇ ಆಯ್ಕೆ ಪ್ರಕ್ರಿಯೆ ವಿಳಂಬವಾಗುತ್ತಿದೆಯೇ? ಎಂಬುದನ್ನು ಬಿಜೆಪಿ ಉತ್ತರಿಸಬೇಕು” ಎಂದು ಪ್ರಶ್ನಿಸುವ ಮೂಲಕ ವ್ಯಂಗ್ಯವಾಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + one =
Remember me
