ಬೆಂಗಳೂರು:ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಮಂತ್ರಿ ನರೇಂದ್ರ ಮೋದಿ. ಈಗ ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.
ಇದನ್ನೂ ಓದಿ:ಮಾಸ್ಕೋದಲ್ಲಿ ಉಗ್ರರ ಅಟ್ಟಹಾಸ: ಸಾವಿನ ಸಂಖ್ಯೆ 115ಕ್ಕೆ ಏರಿಕೆ, 11 ದಾಳಿಕೋರರ ಬಂಧನ!
ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲೆ, ತಾಲ್ಲೂಕು ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡುವುದಿಲ್ಲ:ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್ – ಪೆಟ್ರೋಲ್ – ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ನಾವು ಬಿಜೆಪಿ ಅವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡುವುದಿಲ್ಲ – ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.
ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮ, ಎಲ್ಲಾ ಜಾತಿ, ಎಲ್ಲಾ ವರ್ಗದವರಿಗೆ ಸೇರಿವೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾರ್ಯಕ್ರಮಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಜಾರಿ ಮಾಡುತ್ತಿದೆ. ಇವೆಲ್ಲವನ್ನೂ ನೀವುಗಳು ನಾಡಿನ ಜನರಿಗೆ ಸರಿಯಾಗಿ ಅರ್ಥ ಮಾಡಿಸಿ ಬಿಜೆಪಿಯ ಸುಳ್ಳುಗಳ ಎದುರು ಸತ್ಯದ ದಾಖಲೆಗಳನ್ನು ಮಂಡಿಸಿಎ ಎಂದು ಕರೆ ನೀಡಿದರು.
ಬಿಜೆಪಿ ಮಾಮೂಲಿಯಂತೆ ಸುಳ್ಳು ಹೇಳುತ್ತಿದ್ದಾರೆ:ನಮ್ಮ ಸರ್ಕಾರದ ಗ್ಯಾರಂಟಿಗಳನ್ನು, ನಮ್ಮ ಸಾಧನೆಗಳನ್ನು ಬಿಜೆಪಿ ಸಾಧನೆ ಎಂದು ಹಳ್ಳಿ ಹಳ್ಳಿಗಳಲ್ಲಿ ಅವರು ನಿರಂತರವಾಗಿ, ನಿರ್ಲಜ್ಜರಾಗಿ ಸುಳ್ಳು ಹೇಳುತ್ತಿದ್ದಾರೆ. ನಾಡಿನ ಜನರ ಜೇಬಿಗೆ, ಮಹಿಳೆಯರ ಖಾತೆಗೆ ಹಣ ಹಾಕುತ್ತಿರುವುದು ನಮ್ಮ‌ ಕಾಂಗ್ರೆಸ್ ಸರ್ಕಾರ. ನಮ್ಮ ನಾಡಿನ ಜನತೆಗೆ, ಮಹಿಳೆಯರಿಗೆ, ಯುವ ಸಮೂಹಕ್ಕೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುತ್ತಿರುವುದು ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿಯವರು ಮಾಮೂಲಿಯಂತೆ ಸುಳ್ಳು ಹೇಳುತ್ತಾ ನಮ್ಮ ಕಾರ್ಯಕ್ರಮಗಳನ್ನು ಅವರ ಕಾರ್ಯಕ್ರಮ ಎಂದು ಹೇಳಿಕೊಳ್ಳುವ ಅಪಾಯ ಇದೆ. ಈ ಸುಳ್ಳುಗಳನ್ನು ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು ಸಮರ್ಥವಾಗಿ ಎದುರಿಸಿ ಜನರಿಗೆ ಸತ್ಯ ತಿಳಿಸಬೇಕು ಎಂದು ಕರೆ ನೀಡಿದರು.
ಜನರಿಗೆ ಅರ್ಥ ಮಾಡಿಸಿ:ರಾಜ್ಯದಿಂದ ನಾವು 4 ಲಕ್ಷದ 50 ಸಾವಿರ ಕೋಟಿ ತೆರಿಗೆಯನ್ನು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕಟ್ಟುತ್ತೇವೆ. ಆದರೆ, ಕೇಂದ್ರವು ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಕೇವಲ 50 ಸಾವಿರ ಕೋಟಿ. ಈ ಅನ್ಯಾಯವನ್ನೇ ನ್ಯಾಯ ಎಂದು ಬಿಜೆಪಿ-ಜೆಡಿಎಸ್ ನವರು ಡ್ಯಾನ್ಸ್ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ನವರು ಅನ್ಯಾಯವನ್ನು ಬೆಂಬಲಿಸುತ್ತಿರುವುದನ್ನು ನಮ್ಮ ನಾಡಿನ ಜನರಿಗೆ ಅರ್ಥ ಮಾಡಿಸಬೇಕು ಎಂದು ಹೇಳಿದರು.
ಮಾಸ್ಕೋದಲ್ಲಿ ಉಗ್ರರ ಅಟ್ಟಹಾಸ: ಸಾವಿನ ಸಂಖ್ಯೆ 115ಕ್ಕೆ ಏರಿಕೆ, 11 ದಾಳಿಕೋರರ ಬಂಧನ!

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × one =
Remember me
