ಬೆಂಗಳೂರು:ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕರಾಗಿದ್ದಾರೆ ಎಂದು ಆರ್. ಅಶೋಕ ನೇಮಕಕ್ಕೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಆಯ್ಕೆ ಎರಡೂ ವಿಚಾರವಾಗಿ ರಾಜ್ಯ ಬಿಜೆಪಿ ಕಳೆದ ಕೆಲವು ದಿನಗಳಿಂದ ತೀವ್ರ ವಾಗ್ದಾಳಿ ಎದುರಿಸಿದ್ದು, ಇತ್ತೀಚೆಗಷ್ಟೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದ ಬೆನ್ನಿಗೇ ಇದೀಗ ವಿಪಕ್ಷ ನಾಯಕರ ಆಯ್ಕೆ ಮಾಡಿದೆ. ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಆರ್​.ಅಶೋಕ​ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.​
ಇದರ ಬೆನ್ನಲ್ಲೇ ಎಕ್ಸ್​ (ಈ ಹಿಂದೆ ಟ್ವಿಟರ್​) ಖಾತೆಯಲ್ಲಿ ಪೋಸ್ಟ್​ ಮಾಡಿರುವ ಕಾಂಗ್ರೆಸ್​, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನವಾಗಿದೆ ಎಂದು ಕುಹಕವಾಡಿದೆ.
ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ!
ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ.@siddaramaiah@DKShivakumarಅವರಂತಹ ನಾಯಕರೆದುರು…
— Karnataka Congress (@INCKarnataka)November 17, 2023

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ಬಿಜೆಪಿ ತಂದು ಕೂರಿಸಿದೆ ಎಂದು ಆರ್​. ಅಶೋಕ ಆಯ್ಕೆಗೆ ಕಾಂಗ್ರೆಸ್​ ಲೇವಡಿ ಮಾಡಿದೆ.
ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದೇ ಬಿಜೆಪಿಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅರ್ಹತೆಯೇ? ಈ ಆಯ್ಕೆ ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಆಗಿದ್ದೋ, ಜೆಡಿಎಸ್ ಶಾಸಕರ ಅಭಿಪ್ರಾಯದ ಆಧಾರದಲ್ಲಿ ಆಗಿದ್ದೋ ಅಥವಾ ಬಿಜೆಪಿ ಶಾಸಕರ ಅಭಿಪ್ರಾಯದಿಂದ ಆಗಿದ್ದೋ ಎಂದು ಕಾಂಗ್ರೆಸ್​ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.
ಜೆಡಿಎಸ್ ಪಕ್ಷದೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿದ್ದೇ ಬಿಜೆಪಿಯ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಅರ್ಹತೆಯೇ?
ಈ ಆಯ್ಕೆ ಕುಮಾರಸ್ವಾಮಿಯವರ ನಿರ್ದೇಶನದ ಮೇರೆಗೆ ಆಗಿದ್ದೋ, ಜೆಡಿಎಸ್ ಶಾಸಕರ ಅಭಿಪ್ರಾಯದ ಆಧಾರದಲ್ಲಿ ಆಗಿದ್ದೋ, ಬಿಜೆಪಿ ಶಾಸಕರ ಅಭಿಪ್ರಾಯದಿಂದ ಆಗಿದ್ದೋ@BJP4Karnataka?
— Karnataka Congress (@INCKarnataka)November 17, 2023

ಅಂದಹಾಗೆ ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳಾದ ಬಳಿಕ ಬಿಜೆಪಿ ತನ್ನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಇಬ್ಬರನ್ನೂ ಆಯ್ಕೆ ಮಾಡಿದೆ. ನವೆಂಬರ್​ 10ರಂದು ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕರಾಗಿ ನೇಮಕ ಮಾಡಲಾಯಿತು. ಇದಾದ ಒಂದು ವಾರದ ಬೆನ್ನಲ್ಲೇ ಆರ್​. ಅಶೋಕ ಅವರನ್ನು ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ನಾನು, ವಿಜಯೇಂದ್ರ ಜೋಡೆತ್ತಿನಂತೆ ಕೆಲಸ ಮಾಡ್ತೇವೆ: BJP ನೂತನ ವಿಪಕ್ಷ ನಾಯಕ R. ಅಶೋಕ​ ಹೇಳಿಕೆ

ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ; ಕೊನೆಗೂ ಆಯ್ತು ಮಹತ್ವದ ನಿರ್ಧಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − four =
Remember me
