ಬೆಂಗಳೂರು:ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕಾಂಗ್ರೆಸ್​ ಈಗ ಯೋಜನೆಗಳ ಮಹಾಪೂರವನ್ನೇ ಹರಿಸಲು ಮುಂದಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯೂನಿಟ್​ ವಿದ್ಯುತ್​ಅನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಿದೆ. ಇದೀಗ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಲು ಕಾಂಗ್ರೆಸ್​ ಸಿದ್ಧವಾಗಿದೆ.
ವಿಶೇಷವಾಗಿ ಮಹಿಳೆಯರಿಗೆ ಹಲವು ಯೋಜನೆ ಘೋಷಣೆ ಮಾಡಲು ಸಿದ್ಧವಾಗಿರುವ ಕಾಂಗ್ರೆಸ್​ ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಬಂದ ಕೂಡಲೆ ಸಭೆ ನಡೆಸಲಿದೆ. ವಿಮಾನನಿಲ್ದಾಣದಲ್ಲೇ ಹೊಸ ಯೋಜನೆಗಳ ಬಗ್ಗೆ ಕೈ ನಾಯಕರು ಸಭೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರ ಬಂದ್ರೆ ಯೋಜನೆ ಜಾರಿ ಮಾಡುವ ಗ್ಯಾರಂಟಿ ನೀಡುವ ಬಗ್ಗೆ ಈ ಸಭೆ ಇರಲಿದ್ದು ಇವತ್ತು ಮಹಿಳೆಯರಿಗೆ ಕಾಂಗ್ರೆಸ್ ಹಲವು ಗ್ಯಾರಂಟಿಗಳನ್ನು ನೀಡುವ ನಿರೀಕ್ಷೆ ಇದೆ. ನಿರುದ್ಯೋಗಿ ಯುವತಿಯರಿಗೆ ಮಾಸಿಕ ಭತ್ಯೆ ಘೋಷಣೆ ಮಾಡುವ ಸಾಧ್ಯತೆ ಇದ್ದು ಹಳೆ ಪೆನ್ಸೆನ್ ಯೋಜನೆ ಮರು ಜಾರಿಗೆ ಭರವಸೆ ನೀಡಬಹುದು ಎನ್ನಲಾಗುತ್ತಿದೆ.
ಈ ಸಂದರ್ಭ ಬೆಲೆ ಏರಿಕೆ ವಿರುದ್ಧವಾಗಿ ಮಹಿಳೆಯರಿಗೆ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಗ್ ರಿಲೀಫ್ ನೀಡುವ ಬಗ್ಗೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅದರಲ್ಲಿ ಎಲ್​ಪಿಜಿ ದರ ಕಡಿತ ಮಾಡುವ ಬಗ್ಗೆ ಭರವಸೆ ನೀಡುವ ಸಾಧ್ಯತೆ ಕೂಡ ಇದೆ. ಮಹಿಳೆಯರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಘೋಷಣೆಗಳನ್ನು ಕಾಂಗ್ರೆಸ್​ ಮಾಡುವ ಸಾಧ್ಯತೆ ಬಬಹಿತೇಕ ಹೆಚ್ಚೇ ಇದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 12 =
Remember me
