ಬೆಂಗಳೂರು: ಇಂದು ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆ ಆರಂಭಗೊಳ್ಳಲಿದ್ದು ಬಿಪಿಎಲ್ ಹಾಗೂ ಅಂತ್ಯೋದಯಪಡಿತರ ದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಲಿದೆ.
ಚುನಾವಣಾ ಪೂರ್ವದಲ್ಲಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಪ್ರತಿ ಮನೆಗೂ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡಲಾಗುವುದು ಎನ್ನಲಾಗಿತ್ತು. ನಂತರ ಬಿಪಿಎಲ್ ಪಡಿತರದಾರರಿಗೆ ‍‍10ಕೆಜಿ ಅಕ್ಕಿ ಗ್ಯಾರಂಟಿ ಕಾಂಗ್ರೆಸ್​ ಘೋಷಿಸಿತ್ತು.
ಇದನ್ನೂ ಓದಿ:ಅನ್ನಭಾಗ್ಯ ಗ್ಯಾರಂಟಿ ಯೋಜನೆ ಹಣ ಈ ತಾರೀಕಿಗೆ ಸಿಗಲಿದೆ….
ಇದೀಗ ಐದು ಕೆಜಿ ಅಕ್ಕಿ ಜತೆಗೆ ಉಳಿದ 5 ಕೆ.ಜಿ ಅಕ್ಕಿ ಬದಲಿಗೆ 170 ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗಲಿದ್ದು ಇಂದು ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಲಿದ್ದಾರೆ.
ಇಂದು ಸಂಜೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಯೋಜನೆಗೆ ಚಾಲನೆ ಸಿಗಲಿದ್ದು ಡಿಬಿಟಿ ಮೂಲಕ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 170 ರೂ.ನಂತೆ ಹಣ, ಕುಟುಂಬದ ಮುಖ್ಯಸ್ಥನ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. ಈ ಗ್ಯಾರಂಟಿ ಯೋಜನೆಗೆ ಒಟ್ಟು 1,28,16,253 ಮಂದಿ ಫಲಾನುಭವಿಗಳಿದ್ದು ಈ ಪೈಕಿ ಶೇಕಡಾ 82% ಮಂದಿ ತಕ್ಷಣ ಯೋಜನೆ ಪಡೆಯಲು ಅರ್ಹರಾಗಿದ್ದಾರೆ ಎನ್ನಲಾಗಿದೆ. ಅದಲ್ಲದೇ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ್ದರೆ ಮಾತ್ರವೇ ಹಣ ವರ್ಗಾವಣೆ ಆಗುವುದಾಗಿ ಹೇಳಲಾಗಿದೆ.
ಇದನ್ನೂ ಓದಿ:ಅನ್ನಭಾಗ್ಯ ಹಣವೂ ಮನೆಯೊಡತಿಗಾ..? ದಾವಣಗೆರೆ ಮನೆಗಳಲ್ಲಿ ಚರ್ಚೆ ಶುರು
ಸದ್ಯ 1.2 ಕೋಟಿ ಮಂದಿ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಮಾಡಿಸಿದ್ದು ಇನ್ನು ಉಳಿದ 22 ಲಕ್ಷ ಕಾರ್ಡ್​ದಾರರು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿದ ಬಳಿಕವೇ ಹಣ ವರ್ಗಾವಣೆ ನಡೆಯಲಿದೆ.
ಇದನ್ನೂ ಓದಿ:ಇಂದಿನಿಂದ ಅನ್ನಭಾಗ್ಯ, ಗೃಹಜ್ಯೋತಿ: ಅಕ್ಕಿ ಬದಲು ಹಣ ವರ್ಗಾವಣೆ; ಉಚಿತ ವಿದ್ಯುತ್ ಆಗಸ್ಟ್ ಬಿಲ್​ಗೆ ಅನ್ವಯ
ಇದನ್ನೂ ಓದಿ:ಅನ್ನಭಾಗ್ಯಕ್ಕೆ ಅಕ್ಕಿ ಹೆಚ್ಚುವರಿ: ಜಿಲ್ಲೆಯಲ್ಲಿ ಪ್ರತಿ ತಿಂಗಳು 40 ಸಾವಿರ ಕ್ವಿಂಟಾಲ್ ಅಗತ್ಯ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + one =
Remember me
