ಬೆಂಗಳೂರು:ಜೆಡಿಎಸ್-ಬಿಜೆಪಿ ಮೈತ್ರಿ ಮಾತು ಕೇಳಿ ಮತಿಗೆಟ್ಟು ಕೂತ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಸಿಂಗಲ್ ಸೀಟಿಗೂ ದಿಕ್ಕಿಲ್ಲದ ಸ್ಥಿತಿ ನೆನೆದು ಕೈಕೈ ಪರಚಿಕೊಳ್ಳುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.
ಪಕ್ಷ ವಿಸರ್ಜನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಯನ್ನೇ ತಿರುಚುತ್ತಿರುವ ಕೂಗುಮಾರಿ, ಈಗ ಮಾರಿ ಉಳಿಸಿಕೊಳ್ಳಲು ಸತ್ಯ ತಿರುಚುತ್ತಿದೆ. ಶಿವಸೇನೆ, ಜೆಡಿಯು, ಡಿಎಂಕೆಯಂಥ ಪ್ರಾದೇಶಿಕ ಪಕ್ಷಗಳ ’ಬಾಲ’ದಲ್ಲಿಯೇ ಬದುಕು ಕಂಡುಕೊಂಡು ಏದುಸಿರು ಬಿಡುತ್ತ ದೇಶದ ಉದ್ದಗಲಕ್ಕೂ ‘ಹಸ್ತವ್ಯಸ್ತ’ವಾಗಿದೆ ಎಂದು ಟೀಕಿಸಿದೆ.
ಕಾಶ್ಮೀರದಿಂದ ಕೇರಳವರೆಗೆ, ಗುಜರಾತಿನಿಂದ ಓಡಿಶಾವರೆಗೆ ಕೈ ಪಕ್ಷ ಪಾತಾಳ ಕಚ್ಚಿರುವುದು ಆಸತ್ಯವೇ? ನಡುನೀರಿನಲ್ಲಿ ಮುಳುಗಿಹೋಗಿ 403 ಕ್ಷೇತ್ರಗಳ ಉತ್ತರ ಪ್ರದೇಶದಲ್ಲಿ ಎರಡೇ ಕ್ಷೇತ್ರಗಳಿಗೆ ರನ್ ಔಟ್ ಆಗಿ ಮಕಾಡೆ ಮಲಗಿದ್ದೂ, ಅಲ್ಲೂ ಬಿಎಸ್ಪಿ ಬಾಲ ಹಿಡಿದು ನೇತಾಡಿದ್ದು ಇಷ್ಟು ಬೇಗ ಮರೆತೇ ಹೋಯಿತೇ? ಎಂದು ಕೆಣಕಿದೆ.
2014, 2019ರ ಲೋಕಸಭೆಯ ಚುನಾವಣೆಗಳಲ್ಲಿ ತಳಮುಟ್ಟಿದ ಪಕ್ಷಕ್ಕೆ 2024ರಲ್ಲಾದರೂ ಅವಕಾಶ ಸಿಕ್ಕೀತೇ ಎನ್ನುವ ಚಿಂತೆ. ಕಾಡಿ, ಬೇಡಿ ಕಟ್ಟಿಕೊಂಡ ಇಂಡಿಯಾ ಮೈತ್ರಿಕೂಟಕ್ಕೆ ಸೇರಿಕೊಂಡ ವೀರಾಧಿವೀರರೆಲ್ಲ ಬೆಂಗಳೂರಿಗೆ ಬರುವುದಕ್ಕೆ ಮೊದಲು ಎಲ್ಲೆಲ್ಲಿದ್ದರು? ಚುನಾವಣೆ ಮುಗಿದ ಮೇಲೆ ಎಲ್ಲೆಲ್ಲಿ ಹೋಗುತ್ತಾರೆ? ಬಲ್ಲಿರಾ.. ಬಲ್ಲಿರಾ? ಎಂದು ವ್ಯಂಗ್ಯವಾಡಿದೆ.
ಕಾಂಗ್ರೆಸ್ ಮೈತ್ರಿಕೂಟಕ್ಕೆ ಮೈಯ್ಯೆಲ್ಲಾ ರಂಧ್ರಗಳೇ ಎನ್ನುವ ಅರಿವಿಲ್ಲವೇ? ಅಳಿವಿನ ಅಂಚಿನಲ್ಲಿರುವ ಕಾಂಗ್ರೆಸ್ ಕಾಣದ ಕಡಲಿಗೆ ಹಂಬಲಿಸುತ್ತಿದೆ! ಕಂಡವರ ಆಸರೆಯಲ್ಲಿ ಚಳಿ ಕಾಯಿಸಿಕೊಳ್ಳಲು ಅವರಿವರಿಗೆಲ್ಲ ಕರ ಮುಗಿಯುತ್ತಿದೆ ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:seventeen − four =
Remember me
