ಬೆಂಗಳೂರು: ಸಿ.ಟಿ.ರವಿ ಬಿಜೆಪಿ ರಾಜ್ಯಾಧ್ಯಕ್ಷರಾದರೆ ಸಂತೋಷದಿಂದ ಸ್ವಾಗತಿಸುವುದಾಗಿ ಕೆಪಿಸಿಸಿ ಅಚ್ಚರಿಯ ಅಭಿಪ್ರಾಯ ವ್ಯಕ್ತಪಡಿಸಿದೆ.ಈ ರೀತಿ ಹೇಳುವುಕ್ಕೆ ಒಂದಷ್ಟು ವ್ಯಂಗ್ಯಭರಿತ ಸಮರ್ಥನೆಯನ್ನೂ ನೀಡಿದೆ.ವಿಧಾನಸಭೆ ಚುನಾವಣೆಯಲ್ಲಿ ತವರು ಜಿಲ್ಲೆಯಾದ ಚಿಕ್ಕಮಗಳೂರಿನಲ್ಲಿ ಒಂದೇ ಒಂದು ಕ್ಷೇತ್ರವನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ, ಬೇರೆ ಕ್ಷೇತ್ರವನ್ನು ಗೆಲ್ಲಿಸುವುದಿರಲಿ, ಸ್ವತಃ ತಾವೇ ಹಿನಾಯವಾಗಿ ಸೋತಿದ್ದಾರೆ, ತಮಿಳುನಾಡಿನ ಉಸ್ತುವಾರಿಯಾಗಿ ಮಾಡಿದ ಸಾಧನೆ ಶೂನ್ಯ ಎಂದು ಲೇವಡಿ ಮಾಡಿದೆ.ಇಂತಹ ಹಲವು ವೈಫಲ್ಯಗಳ ಸರದಾರ ಸಿಟಿ ರವಿಯನ್ನು ಬಿಜೆಪಿಯ ರಾಜ್ಯಾಧ್ಯಕ್ಷನನ್ನಾಗಿ ಮಾಡಿದರೆ ಕಾಂಗ್ರೆಸ್ ಭಾರಿ ಲಾಭವಾಗಲಿದೆ. ಅಕಸ್ಮಾತ್ ಬಿಜೆಪಿ ಅವರಿಗೆ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ನಿರ್ಧಾರ ಕೈಗೊಂಡರೆ ಕಾಂಗ್ರೆಸ್ ಪಕ್ಷ ಸಂತೋಷದಿಂದ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಜಾಲತಾಣದಲ್ಲಿ ಹೇಳಿಕೊಂಡಿದೆ.ಕಾಂಗ್ರೆಸ್‌ನ ಈ ಅಭಿಪ್ರಾಯಕ್ಕೆ ಸಾರ್ವಜನಿಕರೂ ಸಹ ವ್ಯಂಗ್ಯಭರಿತ ಪ್ರತಿಕ್ರಿಯೆ ನೀಡಿ, ಪರೋಕ್ಷವಾಗಿ ರಾಹುಲ್ ಗಾಂಧಿಗೆ ಹೇಳಿದಂತಿದೆ…. ಈ ಮಾತನ್ನು ರಾಹುಲ್ ಗಾಂಧಿಗೆ ಹೇಳಿದರೆ ಸಖತ್ತಾಗಿರುತ್ತದೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
