ಬೆಂಗಳೂರು:ನಿಗಮ ಮಂಡಳಿಗಳಿಗೆ ಆಯಾ ಇಲಾಖೆಯ ಸಚಿವರನ್ನೇ ಅಧ್ಯಕ್ಷರನ್ನಾಗಿ ನೇಮಿಸಿರುವ ರಾಜ್ಯ ಸರ್ಕಾರದ ನಡೆ ವಿರುದ್ಧ ಕಾಂಗ್ರೆಸ್ ಮಹಿಳಾ ನಾಯಕಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಮಾಜಿ ಸಚಿವೆ ರಾಣಿ ಸತೀಶ್ ನೇತೃತ್ವದಲ್ಲಿ ಮಹಿಳೆಯರು ಒಟ್ಟಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಎಂಎಲ್‌ಸಿ ನಾಮ ನಿರ್ದೇಶನದಲ್ಲಿ ನಮಗೂ ಆದ್ಯತೆ ನೀಡಿ ಎಂದು ಮನವಿ ಮಾಡಿದ್ದಾರೆ.
ಪಕ್ಷಕ್ಕಾಗಿ ದುಡಿದ ಮಹಿಳೆಯರಿಗೆ ಸರಿಯಾದ ಸ್ಥಾನಮಾನ ಕಲ್ಪಿಸಿಕೊಡುಂತೆ ಕಾಂಗ್ರೆಸ್​ ಮಹಿಳಾ ನಾಯಕಿಯರು ಸಿಎಂ ಸಿದ್ದರಾಮಯ್ಯ ಅವರನ್ನು ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಮಹಿಳಾ ನಾಯಕಿಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ನೇಮಕಾತಿಯಲ್ಲಿ ಮಹಿಳೆಯರನ್ನು ಪರಿಗಣಿಸಬೇಕು. ನಿಗಮ ಮಂಡಳಿಗಳಿಗೆ ಸಚಿವರನ್ನೇ ಅಧ್ಯಕ್ಷರನ್ನಾಗಿ ಮಾಡಿದರೆ ಪಕ್ಷಕ್ಕಾಗಿ ದುಡಿದ ನಮ್ಮ ಕಥೆ ಏನು? ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:PHOTOS | ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಕೆ.ಎಲ್.ರಾಹುಲ್; ಧರ್ಮಾಧಿಕಾರಿಗಳಿಂದ ಸಿಕ್ಕಿತು ವಿಶೇಷ ಉಡುಗೊರೆ
ವಿಧಾನ ಪರಿಷತ್​ಗೆ ನಾಮನಿರ್ದೇಶನ ಅಂತಿಮಗೊಳಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ನಡುವೆ ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ತಮ್ಮ ಆಪ್ತ ಬೆಂಬಲಿಗೆ ಮಣೆ ಹಾಕಲು ಸಿಎಂ ಹಾಗೂ ಡಿಸಿಎಂ ನಡುವೆ ಪೈಪೋಟಿ ಆರಂಭವಾಗಿದೆ ಎನ್ನಲಾಗಿದೆ.
ಎಚ್.ಎಸ್ ಸುಧಾಮ್ ದಾಸ್, ಸಾಧು ಕೋಕಿಲ, ಮನ್ಸೂರ್ ಅಲಿ ಖಾನ್, ರಘುನಂದನ್ ರಾಮಣ್ಣ, ರಾಜೀವ್ ಗೌಡ, ಎಂ.ಆರ್ ಸೀತಾರಾಮ್. ಐವಾನ್ ಡಿಸೋಜ, ಉಮಾಶ್ರೀ ಸೇರಿದಂತೆ ಕೆಲ ಪ್ರಮುಖ ನಾಯಕರ ಹೆಸರು ವಿಧಾನ ಪರಿಷತ್​ಗೆ ನಾಮನಿರ್ದೇಶನವಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 2 =
Remember me
