ಬೆಂಗಳೂರು:ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಗ್ಯಾರಂಟಿಗಳ ಆತಂಕ ಶುರುವಾಗಿದೆ. ಗ್ಯಾರಂಟಿಗಳನ್ನು ಅನುಷ್ಠಾನ ಮಾಡದೇ ಚುನಾವಣೆಗೆ ಹೋದರೆ ಹಿನ್ನಡೆಯಾಗುವ ಆತಂಕ ಎದುರಾಗಿದ್ದು, ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ ಬಳಿಕ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಕಾಂಗ್ರೆಸ್​ ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಚಿವ ಸಂಪುಟ ರಚನೆ ಆಗುತ್ತಿದ್ದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೈ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ. ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಮಾಡುವಂತೆ ಒತ್ತಾಯಿಸಿದ್ದಾರೆ. 135 ಸ್ಥಾನಗಳನ್ನು ಗೆದ್ದು ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ, ಇದೇ ಜೋಶ್​ನಲ್ಲಿ ಸ್ಥಳೀಯ ಚುನಾವಣೆಗೆ ಹೋದರೆ ಒಳ್ಳೆಯದು. ಹೆಚ್ಚು ಸ್ಥಾನ ಗೆಲ್ಲಬಹುದು ಎಂಬ ಅಭಿಪ್ರಾಯವನ್ನು ಸ್ಥಳೀಯ ಮುಖಂಡರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಅನ್ಯಕೋಮಿನ ಯುವತಿ ಜೊತೆ ಚಾಟ್ಸ್​ ತಿಂದಿದ್ದಕ್ಕೆ ಹಲ್ಲೆ; ಆರೋಪಿಗಳು ಅರೆಸ್ಟ್​
ಆದರೆ ಕಾಂಗ್ರೆಸ್​ ನೇತೃತ್ವದ ಸರ್ಕಾರಕ್ಕೆ ಗ್ಯಾರಂಟಿಗಳ ಆತಂಕ ಕಾಡುತ್ತಿದೆ. ಗ್ಯಾರಂಟಿಗಳ ಅನುಷ್ಠಾನ ಮಾಡಬೇಕಾದರೆ ಕೆಲ‌ ಮಾನದಂಡಗಳು ಹಾಕಬೇಕು. ಮಾನದಂಡಗಳ ಆಧಾರಿತವಾಗಿ ಗ್ಯಾರಂಟಿಗಳ ಜಾರಿ ಆಗುತ್ತವೆ. ಅನುಷ್ಠಾನ ಆಗದೆ ಚುನಾವಣೆ ಮಾಡಲು ಆಗುವುದಿಲ್ಲ.
ಒಂದು ವೇಳೆ ಚುನಾವಣೆಗೆ ಹೋದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಇದರಿಂದ ಸರ್ಕಾರಕ್ಕೆ ಮುಜುಗರವೂ ಆಗಬಹುದು. ವಿಪಕ್ಷಗಳು ಇದನ್ನೇ ದೊಡ್ಡ ಅಸ್ತ್ರ ಮಾಡಿಕೊಳ್ಳಬಹುದು. ಹಾಗಾಗಿ ಗ್ಯಾರಂಟಿ ಅನುಷ್ಠಾನ ಬಳಿಕವೇ ಬಿಬಿಎಂಪಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಚಿಂತನೆಯಲ್ಲಿ ಸರ್ಕಾರ ತೊಡಗಿದೆ.(ದಿಗ್ವಿಜಯ ನ್ಯೂಸ್​)
ಮದುವೆಯಾಗುವುದಾಗಿ ನಂಬಿಸಿ ಓಯೋ ರೂಮ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ! ದೂರು ದಾಖಲು

ನೂತನ ಸಂಸತ್​ ಭವನ ಉದ್ಘಾಟನೆ: ರಾಜದಂಡ ಸೆಂಗೋಲ್​ ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ವಿಶೇಷ ಮನವಿ ಬಳಿಕ ಹೊಸ ಸಂಸತ್​ ಭವನದ ವಿಡಿಯೋಗೆ ಶಾರುಖ್​, ಅಕ್ಷಯ್​ ಧ್ವನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
