ಮೈಸೂರು:ಇತ್ತೀಚೆಗಷ್ಟೇ ಉದ್ಘಾಟನೆಯಾದ ನೂತನ ಸಂಸತ್​ ಭವನದಲ್ಲಿ ಭಾರಿ ಭದ್ರತಾ ಲೋಪ ಕಂಡುಬಂದಿದ್ದು, ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್​ ಸಿಂಹ ಅವರ ಕಚೇರಿಗೆ ಕಾಂಗ್ರೆಸ್​ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಕಾಂಗ್ರೆಸ್​ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಈ ಕೃತ್ಯಕ್ಕೆ ಸಂಸದರೇ ನೇರ ಹೊಣೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪಿಸಿದ್ದಾರೆ.
#WATCH| Karnataka: Mysuru Congress workers stage protest in front of the BJP Lok Sabha MP Pratap Sinha's office over the security breach incident in Lok Sabha.Later they were detained by the Police.pic.twitter.com/WOUvfRlv4x
ಇದನ್ನೂ ಓದಿ:ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಸಂಸದ ಪ್ರತಾಪ್​ ಸಿಂಹ ಅವರನ್ನು ವಿಚಾರಣೆಗೆ ಒಳಪಡಿಸಿ: ಸಿಎಂ ಸಿದ್ದರಾಮಯ್ಯ
ವೈರಲ್​ ಆಗಿರುವ ವಿಡಿಯೋದಲ್ಲಿ ಮೈಸೂರಿನ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿರುವ ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಈ ಕೃತ್ಯಕ್ಕೆ ಸಂಸದ ಪ್ರತಾಪ್​ ಸಿಂಹ ಅವರೇ ನೇರ ಹೊಣೆ ಎಂದು ಆರೋಪಿಸಿದ ಕಾಂಗ್ರೆಸ್​ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಸಂಸದರ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + two =
Remember me
