ಬೆಂಗಳೂರು:ವಿಧಾನಸಭೆ ಚುನಾವಣೆ ಪ್ರಚಾರದ ಭಾಗವಾಗಿ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್, ಬುಧವಾರದಿಂದ ನಾಯಕರ ಬಸ್ ಪ್ರವಾಸ ಆರಂಭಿಸುತ್ತಿದೆ. ಮಂಗಳವಾರ ಪಕ್ಷದ ಕಚೇರಿಯಲ್ಲಿ ಪ್ರಜಾಪ್ರತಿನಿಧಿ ಯಾತ್ರೆಗಾಗಿ ಸಿದ್ಧಗೊಂಡ ಬಸ್​ಗೆ ಪೂಜೆ ನೆರವೇರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಳಿಕ ಸುದ್ದಿಗೋಷ್ಠಿ ನಡೆಸಿ, ಯಾತ್ರೆಯ ಮಹತ್ವ ವಿವರಿಸಿದರು. ಹೊಸ ವರ್ಷ, ಹೊಸ ಪರ್ವ. ಬದಲಾವಣೆ ಹಾಗೂ ಕಾಂಗ್ರೆಸ್ ವಿಜಯ ಪರ್ವ ಆರಂಭವಾಗಿದೆ. ಈ ಪವಿತ್ರವಾದ ಗಳಿಗೆಯಲ್ಲಿ ಜನರಿಗಾಗಿ ಪ್ರಜಾಧ್ವನಿ ಯಾತ್ರೆ ಆರಂಭಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದರು. ಜನರ ಭಾವನೆ ತಿಳಿಸಲು ಕಳೆದ 2-3 ವರ್ಷಗಳಿಂದ ಕಾಂಗ್ರೆಸ್ ಸತತವಾಗಿ ಪ್ರಯತ್ನಿಸಿದೆ. ಈ ಪ್ರಜಾಧ್ವನಿ ಯಾತ್ರೆ ಪ್ರಜೆಗಳ ಧ್ವನಿ, ಪ್ರಜೆಗಳ ಭಾವನೆ ಆಗಿದೆ. ನಾವು ಋಣಾತ್ಮಕತೆ ಬಗ್ಗೆ ಚಿಂತನೆ ಮಾಡುತ್ತಿಲ್ಲ. ಸಕಾರಾತ್ಮಕತೆ ಬಗ್ಗೆ ಯೋಚಿಸುತ್ತಿದ್ದೇವೆ ಎಂದರು.
ಕಳೆದ ಮೂರೂವರೆ ವರ್ಷಗಳಿಂದ ಬಿಜೆಪಿ ಸರ್ಕಾರದ ವೈಫಲ್ಯ, ನಾವು ಜನರ ಬದುಕಿಗಾಗಿ ಏನು ಮಾಡಲು ಸಿದ್ಧವಿದ್ದೇವೆ ಎಂದು ತಿಳಿಸಿಲು ನಾವು ಈ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೇವೆ ಎಂದು ಡಿಕೆಶಿ, ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಐತಿಹಾಸಿಕ ಸ್ಥಳ ಬೆಳಗಾವಿಯ ಗಾಂಧಿ ಬಾವಿಯಿಂದ ಗುರುವಾರ ಈ ಯಾತ್ರೆ ಆರಂಭವಾಗುತ್ತಿದೆ. ಗಾಂಧಿ ಅವರಿಗೆ ಗೌರವ ಸಲ್ಲಿಸಿ ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಲು ಯಾತ್ರೆ ಆರಂಭಿಸುತ್ತಿದ್ದೇವೆ. ಕರ್ನಾಟಕದ ಬದಲಾವಣೆ ಹಾಗೂ ವಿಜಯಕ್ಕೆ ಮುನ್ನುಡಿ ಬರೆಯುತ್ತಿದ್ದೇವೆ ಎಂದು ಹೇಳಿದರು. ಇಂದು ರಾಜ್ಯಕ್ಕೆ ಭ್ರಷ್ಟಾಚಾರದ ಕಳಂಕ ಬಂದಿದೆ. ಈ ಕಳಂಕವನ್ನು ನಾವು ದೂರ ಮಾಡಬೇಕು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ವರ್ಗದವರ ಬದುಕು ಹಸನಾಗಿಲ್ಲ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದ ಬಿಜೆಪಿ ರೈತರ ಬದುಕು ಹಸನು ಮಾಡಲಿಲ್ಲ. ಯುವಕರಿಗೆ ಉದ್ಯೋಗ ನೀಡಲಿಲ್ಲ. ಹೆಣದ ಮೇಲೆ ಹಣ ಮಾಡಿದ್ದಾರೆ. ಪ್ರತಿ ಇಲಾಖೆಯಲ್ಲಿ ಎಲ್ಲಾ ಸಂದರ್ಭದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.
2 ಲಕ್ಷ ಗುತ್ತಿಗೆದಾರರು ಶೇ.40 ಕಮಿಷನ್ ಕಿರುಕುಳ ತಾಳಲಾಗುತ್ತಿಲ್ಲ ಎಂದು ಧ್ವನಿ ಎತ್ತಿದ್ದಾರೆ. ಅದಕ್ಕೂ ಈ ಸರ್ಕಾರ ಪರಿಹಾರ ನೀಡಲಿಲ್ಲ. ಎಲ್ಲ ವರ್ಗದ ಜನ ಭಯದಲ್ಲಿ ಬದುಕುತ್ತಿದ್ದಾರೆ. ಅದೇ ರೀತಿ ರಾಜ್ಯದಲ್ಲಿ 83,190 ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. 1,258 ಕಂಪನಿಗಳು ಬಾಗಿಲು ಹಾಕುವ ಪರಿಸ್ಥಿತಿ ಬಂದಿದೆ. ಬಂಡವಾಳ ಹೂಡಿಕೆದಾರರು ನೆರೆ ರಾಜ್ಯಕ್ಕೆ ವಲಸೆ ಹೋಗುತ್ತಿದ್ದಾರೆ. ಇದು ರಾಜ್ಯಕ್ಕೆ ಅಪಮಾನಕರ ಸಂಗತಿ ಎಂದರು. ರಾಜ್ಯದ ಎಲ್ಲ ಜನರು ತಮ್ಮ ಕೈಯನ್ನು ನಮ್ಮ ಕೈ ಜತೆ ಜೋಡಿಸಲಿ. ಒಗ್ಗಟ್ಟಿನಿಂದ ಬದಲಾವಣೆ ಮಾಡೋಣ ಎಂದು ಕೇಳಿಕೊಳ್ಳುತ್ತೇನೆ. ನಿಮ್ಮ ಹಕ್ಕು ನಮ್ಮ ಹೋರಾಟ ಬಗ್ಗೆ ವೆಬ್​ಸೈಟ್ ಕೂಡ ಆರಂಭಿಸಿದ್ದು, ಅಭಿಪ್ರಾಯ ಹಂಚಿಕೊಳ್ಳಲೂ ಅವಕಾಶವಿದೆ. ಹಾಗೂ ದೂರವಾಣಿ ಸಂಖ್ಯೆ 9537224224ಕ್ಕೆ ಕರೆ ಮಾಡಿ ಅಭಿಪ್ರಾಯವನ್ನು ಕಳುಹಿಸಿಕೊಡಬಹುದೆಂದು ವಿವರಿಸಿದರು.
ಆಲಿಬಾಬ ಮತ್ತು 40 ಕಳ್ಳರು!:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನಾಯಿಮರಿಗೆ ಹೋಲಿಸಿ ಪುಕ್ಕಲು ಸ್ವಭಾವ ಎಂದು ಟೀಕಿಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮದೇ ಧಾಟಿಯಲ್ಲಿ ಟೀಕೆಯನ್ನು ಮುಂದವರಿಸಿ, ಬಸವರಾಜ ಬೊಮ್ಮಾಯಿ ಅತಿ ದುರ್ಬಲ ಮುಖ್ಯಮಂತ್ರಿ ಹಾಗೂ ರಾಜ್ಯಕ್ಕೆ ಕಳಂಕ ತಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಕೇವಲ ಭ್ರಷ್ಟ ಮಾತ್ರವಲ್ಲ, ದುರ್ಬಲ ಸಿಎಂ. ಕೇಂದ್ರ ಹೇಳಿದಂತೆ ವರ್ತಿಸುವ ಸರ್ಕಾರ ಎಂದರಲ್ಲದೆ, ಈ ಸರ್ಕಾರ ಅಲಿಬಾಬಾ ಮತ್ತು 40 ಕಳ್ಳರಂತೆ ಆಗಿದೆ. ಹೀಗಾಗಿ ಈ ಸರ್ಕಾರದ ವಿರುದ್ಧ ಆರೋಪ ಪಟ್ಟಿ ಮಾಡಿ ಜನರ ಮುಂದೆ ಇಡುತ್ತಿದ್ದೇವೆ ಎಂದರು.
ಚುನಾವಣಾ ಕಣಕ್ಕೆ ಸುದೀಪ್?:ವಿಧಾನಸಭಾ ಚುನಾವಣೆಯಲ್ಲಿ ಗಂಭೀರವಾಗಿ ಪರಿಗಣಿಸಿ ವಿವಿಧ ಪಟ್ಟುಗಳನ್ನು ಹಾಕುತ್ತಿರುವ ಕಾಂಗ್ರೆಸ್ ಇದೀಗ ನಟ ಸುದೀಪ್ ಅವರನ್ನು ವಿಧಾನಸಭಾ ಚುನಾವಣೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಪ್ರಯತ್ನಿಸಿದೆ ಎಂದು ಹೇಳಲಾಗಿದೆ. ಎಐಸಿಸಿ ಮಟ್ಟದಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಸೋಷಿಯಲ್ ಮೀಡಿಯಾದ ಪ್ರಮುಖರೊಬ್ಬರು ಸುದೀಪ್ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಪ್ರಯತ್ನ ಯಶಸ್ವಿಯಾದರೆ ಸುದೀಪ್ ಚಿತ್ರದುರ್ಗ ಅಥವಾ ಶಿವಮೊಗ್ಗ ಜಿಲ್ಲೆಯಿಂದ ಕಣಕ್ಕೆ ಇಳಿಯಬಹುದೆಂದು ಹೇಳಲಾಗಿದೆ.
ಡಾ.ಬ್ರೋ ಯಾವಾಗ ವಿದೇಶಕ್ಕೆ ಹೋಗಲ್ಲ?; ಒಂದು ದೇಶಕ್ಕೆ ಹೊರಟಾಗ ಅವರ ಅಧ್ಯಯನ ಹೇಗಿರುತ್ತೆ?; ಇಲ್ಲಿದೆ ಮಾಹಿತಿ..

‘ನಾನು ಯೂಟ್ಯೂಬರ್ ಆಗಿದ್ದು ಯಾಕೆ?’ ಅಂತ ಖುದ್ದು ಡಾ.ಬ್ರೋ ಅವರೇ ಹಂಚಿಕೊಂಡಿದ್ದಾರೆ ಇಲ್ಲಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
