ಬೆಳಗಾವಿ:ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ಮತ್ತು ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ ರಾವ್​​​ ನಡುವಿನ ಸಂಘರ್ಷ ಪ್ರಕರಣ ಅತ್ಯಾಚಾರ ಪ್ರಕರಣವಾಗಿ ಪರಿಣಮಿಸಿದ್ದು, ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಈ ಮಧ್ಯೆ ನವ್ಯಶ್ರೀ ವೈದ್ಯಕೀಯ ಪರೀಕ್ಷೆಗೆ ಸಹಕರಿಸದ ವಿಷಯ ಬೆಳಕಿಗೆ ಬಂದಿದೆ.
ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಮೊದಲಿಗೆ ನವ್ಯಶ್ರೀ ವಿರುದ್ಧ ಬ್ಲ್ಯಾಕ್​ಮೇಲ್ ಪ್ರಕರಣ ದಾಖಲಿಸಿದ್ದಾರೆ. ಅದಾಗಿ ಕೆಲವೇ ದಿನಗಳಲ್ಲಿ ಟಾಕಳೆ ವಿರುದ್ಧ ಸರಣಿ ಆರೋಪ ಮಾಡಿದ್ದ ನವ್ಯಶ್ರೀ, ಟಾಕಳೆ ವಿರುದ್ಧ ಅತ್ಯಾಚಾರವೂ ಸೇರಿದಂತೆ ಹಲವು ಆರೋಪಗಳನ್ನು ಹೊರಿಸಿ ಬೆಳಗಾವಿಯಲ್ಲಿ ದೂರು ದಾಖಲಿಸಿದ್ದರು.
ಇದನ್ನೂ ಓದಿ:ರಾಜಕುಮಾರ ಟಾಕಳೆ ವಿರುದ್ಧ ಎಫ್​ಐಆರ್​; ಕಾಂಗ್ರೆಸ್​ ಯುವ ನಾಯಕಿ ನವ್ಯಶ್ರೀ ಪ್ರಕರಣ..
ಆದರೆ ಈಗ ಅತ್ಯಾಚಾರ ವಿಚಾರವಾಗಿ ವೈದ್ಯಕೀಯ ಪರೀಕ್ಷೆಗೆ ನವಶ್ರೀ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ವೈದ್ಯಕೀಯ ಪರೀಕ್ಷೆಗೆಂದು ನಿನ್ನೆ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ನವ್ಯಶ್ರೀ, ಎಪಿಎಂಸಿ ಪೊಲೀಸರ ಸೂಚನೆ ಮೇರೆಗೆ ವೈದ್ಯಕೀಯ ತಪಾಸಣೆಗೆ ಒಳಪಡಬೇಕಾಗಿದೆ. ಆದರೆ ಆಸ್ಪತ್ರೆಯಲ್ಲಿ ಬಿಸಿ ನೀರಿಲ್ಲ, ಊಟದ ವ್ಯವಸ್ಥೆ ಸರಿಯಾಗಿಲ್ಲ ಎಂದು ಕಿರಿಕ್ ತೆಗೆದಿರುವ ನವ್ಯಶ್ರೀ, ಮಹಿಳಾ ಪೊಲೀಸ್ ಸಿಬ್ಬಂದಿ ಅಸಹಕಾರ ತೋರುತ್ತಿರುವುದು ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ ಎನ್ನುವುದು ಮೂಲಗಳಿಂದ ತಿಳಿದುಬಂದಿದೆ.
ಮುಂದಿನ ತಿಂಗಳು ಮದುವೆ ಆಗಬೇಕಿದ್ದವ ತಂದೆಯ ತಿಥಿಯ ಬೆನ್ನಿಗೇ ಆತ್ಮಹತ್ಯೆ!

ಪೊಲೀಸರ ಮೇಲಿನ ಸಿಟ್ಟಿಗೆ ಹೊಯ್ಸಳ ವಾಹನಕ್ಕೇ ಪೆಟ್ರೋಲ್ ಸುರಿದು ಬೆಂಕಿ ಇಟ್ಟ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 4 =
Remember me
