ಬೆಂಗಳೂರು:ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಸುಳ್ಳು ಆರೋಪ ಮಾಡಿ ತೇಜೋವಧೆ ಪ್ರಯತ್ನಿಸಿರುವವರನ್ನು ಪತ್ತೆ ಮಾಡಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲೆಯ ಶಾಸಕರ ನಿಯೋಗ, ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನು ಒತ್ತಾಯಿಸಿದೆ.ಶಾಸಕರಾದ ನರೇಂದ್ರಸ್ವಾಮಿ, ದಿನೇಶ್ ಗೂಳಿಗೌಡ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಪತ್ರ ಅರ್ಪಿಸಿರುವ ಅವರು, ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸಿದವರನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕೋರಿದ್ದಾರೆ.ಕೃಷಿ ಇಲಾಖೆ ಜವಾಬ್ದಾರಿಯನ್ನು ಮಾನ್ಯ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಅವರ ಜನಪ್ರಿಯತೆ, ಏಳಿಗೆಯನ್ನು ಸಹಿಸದ ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ಅವರ ವಿರುದ್ಧ ಪಿತೂರಿ ಕೆಲಸವನ್ನು ಮಾಡುತ್ತಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಯಾವೊಬ್ಬ ಕೃಷಿ ಅಧಿಕಾರಿಯು ಸಹ ಅವರ ವಿರುದ್ಧ ಈ ರೀತಿಯ ಪತ್ರ ಬರೆದಿಲ್ಲ ಮತ್ತು ಸಹಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿರುತ್ತಾರೆ. ನಕಲಿ ಸಹಿ ಮಾಡಿ ರಾಜ್ಯಪಾಲರಿಗೆ ದೂರು ಕೊಟ್ಟಿರುವುದು ಅಕ್ಷಮ್ಯ ಅಪರಾಧವಾಗಿದೆ. ಅವರ ವಿರುದ್ಧ ಇಂತಹ ಹತ್ತಾರು ಷಡ್ಯಂತ್ರಗಳು ನಡೆಯುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಹುಚ್ಚಪ್ಪ, ರಾಮಚಂದ್ರಪ್ಪ, ಕೆಪಿಸಿಸಿ ಮಾಧ್ಯಮ ವಿಭಾಗ ಉಪಾಧ್ಯಕ್ಷ ರಮೇಶ್ ಬಾಬು, ಕೆಪಿಸಿಸಿ ಮಾಧ್ಯಮ ಸಂಯೋಜಕರಾದ ರಾಜು ಜಿ.ಸಿ ಅವರುಗಳು ನಿಯೋಗದಲ್ಲಿದ್ದರು. ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಿಐಡಿ ತನಿಖೆಗೆಇದೇ ವೇಳೆ ನಿಯೋಗಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 9 =
Remember me
