ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ಸಂವಿಧಾನ ಜಾಗೃತಿ ಜಾಥಾ, 26ರ ಗಣ ರಾಜ್ಯೋತ್ಸವ ದಿನದಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ‌.
ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಚಿವರಿಬ್ಬರು ಮಂಗಳವಾರ ವಿಡಿಯೋ ಸಂವಾದ ನಡೆಸಿದರು. ಒಂದು ತಿಂಗಳ ಕಾಲ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆ ಸಂಚರಿಸಲಿದೆ ಎಂದು ತಿಳಿಸಿದರು.
ಜಿಲ್ಲಾ ಕೇಂದ್ರಗಳಿಂದ ಹೊರಡಲಿರುವ ಜಾಥ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಮತ್ತು ಇತರೆ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಜಿಲ್ಲೆಯಲ್ಲಿ ಸಂಚಾರಿಸುವಂತೆ ಜಿಲ್ಲಾ ಆಡಳಿತ ಪೂರ್ವಪ್ರತ್ಯಯ ಮಾರ್ಗನಕ್ಷೆ ರೂಪಿಸಿಕೊಳ್ಳಲು ಸಚಿವದ್ವಯರು ನಿರ್ದೇಶನ ನೀಡಿದರು.
ಒಂದು ತಿಂಗಳ ಕಾಲ ರಾಜ್ಯದಲ್ಲಿ ಆಚರಿಸಲಿರುವ ʼಸಂವಿಧಾನ ಜಾಗೃತಿ ಸಮಾವೇಶʼದ ಸ್ವರೂಪ ಹಾಗೂ ಗ್ರಾಮೀಣ ಜನರಿಗೆ ಸಂವಿಧಾನದ ಆಶಯಗಳನ್ನು ತಲುಪಿಸುವಲ್ಲಿ ತೆಗೆದುಕೊಳ್ಳಬೇಕಾದ ಕ್ರಮ ಕುರಿತಂತೆ ವಿವರಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರು ದೇಶ ತನ್ನದೇ ಆದ ಸಂವಿಧಾನ ರೂಪಿಸಿ 75 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರ ಇಡೀ ರಾಜ್ಯದ ಬಹುತೇಕ ಗ್ರಾಮಗಳನ್ನು ಒಳಗೊಂಡಂತೆ ಕಾರ್ಯಕ್ರಮ ರೂಪಿಸಿದೆ.
ಸಂವಿಧಾನದ ಮಹತ್ವ ಹಾಗೂ ಈ ದೇಶದ ಜನತೆಗೆ ಸಂವಿಧಾನ ನೀಡಿರುವ ಹಕ್ಕುಗಳನ್ನು ಕುರಿತಂತೆ ರಾಜ್ಯದ ಮಹಿಳೆಯರು, ಯುವ ಜನರು ಹಾಗೂ ನಾಗರಿಕರಿಗೆ ಬಹು ಮಾಧ್ಯಮಗಳ ಮೂಲಕ ಅರಿವು ಮೂಡಿಸಲು ಈ ವಿಭಿನ್ನ ಸಮಾವೇಶವನ್ನು ಸಜ್ಜುಗೊಳಿಸಲಾಗಿದೆ ಎಂದು ಹೇಳಿದರು.
ಸಂವಿಧಾನ ಪೀಠಿಕೆಯ ಮುದ್ರಿತ ಪ್ರತಿಗಳ ವಿತರಣೆ, ಬಸವಣ್ಣನವರ ಸಂದೇಶ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ ಅವರ ವಿಚಾರಧಾರೆಗಳ ಬಗ್ಗೆ ತಜ್ಞರಿಂದ ಭಾಷಣ, ಜಾನಪದ ನೃತ್ಯ ಪ್ರದೃಶನಗಳ ಮೂಲಕ ನಮ್ಮ ಪರಂಪರೆಯ ಆಕರ್ಷಣೆ ಸೇರಿದಂತೆ ಜಾಥದಲ್ಲಿ ಸಂಚರಿಸಲಿರುವ ಎಲ್.ಇ.ಡಿ ವಾಹನದ ಮೂಲಕ ವಿಡಿಯೊ ಪ್ರದರ್ಶಿಸಲು ಅನುವು ಮಾಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಸ್ಥಳಿಯ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಸ್ಥಬ್ಧಚಿತ್ರಗಳನ್ನು ಸೃಜನಶೀಲವಾಗಿಸಲು ಜಿಲ್ಲಾ ಸಮಿತಿಗಳು ಯೋಚಿಸಬೇಕು. ರಾಜ್ಯದ ಏಳು ಜಿಲ್ಲೆಗಳ ಹತ್ತು ಸ್ಥಳಗಳಿಗೆ ಡಾ.ಬಿ.ಆರ್. ಅಂಬೇಡ್ಕರ್‌ ಭೇಟಿ ನೀಡಿದ್ದು, ಆ ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಭೆಗಳನ್ನು ನಡೆಸಿ ʼಸಂವಿಧಾನ ಜಾಗೃತಿ ಸಮಾವೇಶʼ ಯಶಸ್ವಿಗೊಳಿಸಲು ರೂಪುರೇಷೆಗಳನ್ನು ಹಾಕಿಕೊಳ್ಳಲು ಹಾಗೂ ಎನ್.ಜಿ.ಒಗಳು ಮತ್ತು ಜಿಲ್ಲೆಯ ಅಂಘಟನೆಗಳು, ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸಿ ಜಾಥ ಯಶಸ್ವಿಗೆ ಕಾರ್ಯಕ್ರಮ ಹಾಕಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.
ಸಭೆಯಲ್ಲಿ ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್‌, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹೇಶ್ವರನ್‌, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ.ಕೆ.ರಾಕೇಶ್‌ ಕುಮಾರ್‌, ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − three =
Remember me
