ಬೆಂಗಳೂರು:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದಲಿತರಿಗೆ ಮಾತ್ರವಲ್ಲದೆ ಸಮಾಜದ ಎಲ್ಲ ವರ್ಗದ ಸಮಾನತೆಗಾಗಿ ಸಂವಿಧಾನ ರಚಿಸಿದ್ದಾರೆ ಎಂದು ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸಿ.ಮುನಿಕೃಷ್ಣ ತಿಳಿಸಿದ್ದಾರೆ.
ಅಂಬೇಡ್ಕರ್ ಅವರ 64ನೇ ಪರಿನಿರ್ವಾಣ ದಿನದ ಪ್ರಯುಕ್ತ ನಿಗಮದ ಪ್ರಧಾನ ಕಛೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಹೋರಾಟ, ಸಾಧನೆ ಮತ್ತು ದೇಶಕ್ಕೆ ಅವರು ನೀಡಿರುವ ಕೊಡುಗೆ ಅವಿಸ್ಮರಣೀಯ ಎಂದು ಬಣ್ಣಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅಭಿಮಾನಿಯಾಗಿದ್ದು, ಅಧಿಕಾರಕ್ಕೆ ಬಂದ ನಂತರ ಅಂಬೇಡ್ಕರ್ ಹುಟ್ಟಿದ ಸ್ಥಳ ಹಾಗೂ ದೇಶ-ವಿದೇಶಗಳಿಲ್ಲಿ ಅಂಬೇಡ್ಕರ್ ತೆರಳಿ ಕಾರ್ಯನಿರ್ವಹಿಸಿದ ಸ್ಥಳಗಳನ್ನು ಮರು ವಶಕೆ ಪಡೆದು ಅಭಿವೃದ್ಧಿ ಪಡಿಸಿದ್ದಾರೆ. ಶ್ಯಾಮ್ ಪ್ರಸಾದ್ ಮುಖರ್ಜಿ ಮತ್ತು ಅಂಬೇಡ್ಕರ್ ಕಾಶ್ಮೀರಕ್ಕೆ ಸಂಬಂಧಿಸಿದ ಆರ್ಟಿಕಲ್ 374 ವಿರೋಧಿಸಿದ್ದರು. ಮೋದಿ ಸರ್ಕಾರ ಇದೀಗ ಈ ಆರ್ಟಿಕಲ್ 374 ರದ್ದುಪಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಮಾಣಿಕ ಆಡಳಿತಕ್ಕೆ ಬದ್ಧ:ಅಂಬೇಡ್ಕರ್ ಹೆಸರಿನಲ್ಲಿರುವ ನಿಗಮವನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಇನ್ನುಷ್ಟು ಕೆಲಸ ಮಾಡಬೇಕಿದೆ. ಹಾಗಾಗಿ, ನನ್ನ ಅವಧಿಯಲ್ಲಿ ಪ್ರಾಮಾಣಿಕ ಹಾಗೂ ದಕ್ಷ ಆಡಳಿತ ನೀಡಿ ನಿಗಮದ ಕಾರ್ಯಕ್ರಮಗಳು ಜನರಿಗೆ ನೇರವಾಗಿ ತಲುಪಿಸುವ ವ್ಯವಸ್ಥೆ ಮಾಡುವುದಾಗಿ ಎಂದು ಮುನಿಕೃಷ್ಣ ಹೇಳಿದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:12 − 1 =
Remember me
