ಚಾಮರಾಜನಗರ:‘ಸಂವಿಧಾನ ಓದು’ ಪುಸ್ತಕ ವಿತರಣಾ ಸಮಾರಂಭದಲ್ಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಕಣ್ಣೀರು ಹಾಕಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಕಾಯಕ್ರಮದಲ್ಲಿ ವಿ.ಶ್ರೀನಿವಾಸ ಪ್ರಸಾದ್​ರ ಸಂಸದರ ನಿಧಿ ಬಳಸಿ ಚಾಮರಾಜನಗರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 30 ಸಾವಿರ ಪಿಯು ವಿದ್ಯಾರ್ಥಿಗಳಿಗೆ ನ್ಯಾ. ನಾಗಮೋಹನದಾಸ್ ರಚಿಸಿರುವ ‘ಸಂವಿಧಾನ ಓದು’ ಪುಸ್ತಕವನ್ನ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿತರಿಸಿದರು.ಇದನ್ನೂ ಓದಿರಿಜಾರಕಿಹೊಳಿ ಸಿಡಿ ಕೇಸ್: ಆ ಐವರ ಬಗ್ಗೆ ದಿನೇಶ್​ ಕಲ್ಲಹಳ್ಳಿ ಹೇಳಿದ್ದೇನು?
ಡಾ.ಬಿ.ಆರ್. ಅಂಬೇಡ್ಕರ್ ಕುರಿತು ಸಾಹಿತಿ ಡಾ.ಸಿದ್ದಲಿಂಗಯ್ಯ ಅವರು ಬರೆದಿರುವ ‘ನಾಡನಡುವಿನಿಂದ ಸಿಡಿದ ನೋವಿನ ಕೂಗೆ, ಆಕಾಶದಗಲಕ್ಕೆ ನಿಂತ ಆಲವೇ…’ ಗೀತೆಯನ್ನ ಪುಸ್ತಕ ವಿತರಣೆ ಸಮಾರಂಭದಲ್ಲಿ ಗಾಯಕ ಸಿಎಂ ನರಸಿಂಹಮೂರ್ತಿ ಹಾಡುತ್ತಿದ್ದರು. ಈ ವೇಳೆ ಹಾಡು ಕೇಳುತ್ತ ಸಂಸದರು ಗದ್ಗದಿತರಾದರು.
ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶದ ಸರ್ವೋತ್ಕೃಷ್ಟ ಗ್ರಂಥ. ಚಹಾ ಮಾಡುತ್ತಿದ್ದ ನಾನು ಪ್ರಧಾನಿ ಆಗಲು ಸಂವಿಧಾನ ಕಾರಣ ಎಂದು ಮೋದಿ ಹೇಳಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ಸಂಸ್ಥೆ ನಮ್ಮ ಪಾರ್ಲಿಮೆಂಟ್ ಎಂದು ಸಂಸದ ಶ್ರೀನಿವಾಸ ಪ್ರಸಾದ್ ಹೇಳಿದರು.
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿನ ಎಸ್.ಟಿ.ಸೋಮಶೇಖರ್, ಶಾಸಕರಾದ ಸಿ‌.ಪುಟ್ಟರಂಗಶೆಟ್ಟಿ, ನರೇಂದ್ರ, ಎನ್.ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
