ಬೆಂಗಳೂರು:ಕಾವೇರಿ ಜಲ ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರ ಹೇಳಿದ್ದಕ್ಕಿಂತ ಹೆಚ್ಚಿನ ಪ್ರಮಾಣದ ನೀರು ತಮಿಳುನಾಡಿಗೆ ಹೋಗಿದೆ. ಸುಖಾಸುಮ್ಮನೆ ಕಾಲು ಕೆರೆದು ಜಗಳಕ್ಕೆ ಬರುವುದಲ್ಲ, ಕರ್ನಾಟಕದ ಬಗ್ಗೆ ನಿಮ್ಮ ನಡವಳಿಕೆಗಳನ್ನು ತಿದ್ದಿಕೊಳ್ಳಿ ಎಂದು ತಮಿಳುನಾಡು ಸಿಎಂ ಸ್ಟಾಲಿನ್​ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ನಾನು ರಾಜ್ಯಕ್ಕೆ ಭೇಟಿ ನೀಡುವುದು ಡಿಕೆ ಶಿವಕುಮಾರ್‌ ಸಹಿಸುತ್ತಿಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ತಮಿಳುನಾಡು ಮುಖ್ಯಮಂತ್ರಿ ಅವರಿಗೆ ಹಾಗೂ ಅಲ್ಲಿನ ರಾಜಕಾರಣಿಗಳಿಗೆ ಹೇಳುವುದಿಷ್ಟೇ. ಈ ಮಾತನ್ನು ನಾನು ಕೇಂದ್ರ ಸಚಿವನಾಗಿ ಹೇಳುತ್ತಿಲ್ಲ. ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಐದಾರು ದಿನಗಳಿಂದ ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಪ್ರತೀದಿನ ಎಂಟರಿಂದ ಹತ್ತು ಟಿಎಂಸಿ ನೀರು ನೆರೆರಾಜ್ಯಕ್ಕೆ ಹರಿದುಹೋಗಿದೆ. ಜೂನ್‌ ಮತ್ತು ಜುಲೈ ತಿಂಗಳಿನಲ್ಲಿ ಎಷ್ಟೆಲ್ಲಾ ನೀರು ಹರಿಸಬೇಕಾಗಿತ್ತೋ ಅಷ್ಟೂ ನೀರನ್ನು ಈ ತಿಂಗಳಲ್ಲಿ ಸಂಪೂರ್ಣವಾಗಿ ಹರಿಸಲಾಗಿದೆ.
ಕಾವೇರು ನೀರು ನಿರಂತರವಾಗಿ ಬಂದಾಗ ನಿಮಗಾಗಲಿ ಅಥವಾ ನಿಮ್ಮ ರೈತರಿಗಾಗಲಿ ಕೊರತೆ ಮಾಡಿಲ್ಲ. ಹಲವಾರು ವರ್ಷ ನಿಮಗೆ ಕೊಡಬೇಕಾದ ನೀರಿಗಿಂತ ಮೂರು ಪಟ್ಟು ಹೆಚ್ಚು ನೀರನ್ನು ಕೊಟ್ಟಿದ್ದೇವೆ. ನಾವು ಬಿಟ್ಟ ನೀರೆಲ್ಲವೂ ಸಮುದ್ರಕ್ಕೆ ಹೋಗ್ತಾ ಇರುವುದನ್ನು ನಾವು ಕಾಣುತ್ತಿದ್ದೇವೆ ಎಂದರು.ವ್ಯರ್ಥವಾಗಿ ಸಮುದ್ರಕ್ಕೆ ಸೇರುವ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ, ಎರಡೂ ರಾಜ್ಯಗಳ ರೈತರಿಗೆ ಹಾಗೂ ಕುಡಿಯುವ ನೀರಿಗೆ ಅನುಕೂಲವಾಗುವಂತೆ ಮೇಕೆದಾಟು ಯೋಜನೆ ನಿರ್ಮಾಣ ಆಗಬೇಕಿದೆ. ಅನೇಕ ವರ್ಷಗಳಿಂದ ಈ ಬಗ್ಗೆ ತಮಿಳುನಾಡು ಆಕ್ಷೇಪ ತೆಗೆಯುತ್ತಿದೆ. ಇದರ ಬಗ್ಗೆ ತಮಿಳುನಾಡು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದರು.
ವಾಲ್ಮೀಕಿ ನಿಗಮದ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿ: ಸಂಸದ ಕಾಗೇರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
