ಬೆಂಗಳೂರು:ದಕ್ಷಿಣ ಭಾರತದ ಇಸ್ರೇಲ್ ಕಾನ್ಸುಲೇಟ್ ಜನರಲ್ ಟಾಮಿ ಬೆನ್-ಹೈಮ್ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.
ಬಿಡದಿಯ ತೋಟಕ್ಕೆ ಆಗಮಿಸಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಹೈಮ್, ಕರ್ನಾಟಕ ಮತ್ತು ಇಸ್ರೇಲ್ ನಡುವಿನ ಬಾಂಧವ್ಯದ ಬಗ್ಗೆ ಚರ್ಚಿಸಿದರು.ಅಲ್ಲದೆ, ಹಮಾಸ್ ವಿರುದ್ಧ ನಡೆಸಲಾಗುತ್ತಿರುವ ನಿರ್ಣಾಯಕ ಹೋರಾಟದ ಬಗ್ಗೆಯೂ ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದರಲ್ಲದೆ, ಯುದ್ಧ ಮುಗಿದು ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಮೇಲೆ ಕೃಷಿ, ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ, ತಂತ್ರಜ್ಞಾನ ವಿನಿಮಯ, ಸಾಂಸ್ಕೃತಿಕ ಸಂಬಂಧಗಳು ಸೇರಿದಂತೆ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಕರ್ನಾಟಕದ ಜತೆ ಕೆಲಸ ಮಾಡಲು ಉತ್ಸುಕವಾಗಿರುವುದಾಗಿ ತಿಳಿಸಿದರು.
ಹಮಾಸ್ ಉಗ್ರರು ಇಸ್ರೇಲ್, ಅಮೆರಿಕ ಸೇರಿ ವಿವಿಧ ದೇಶಗಳ ಮಕ್ಕಳು, ವೃದ್ಧರು, ಮಹಿಳೆಯರನ್ನು ಅಪರಣ ಮಾಡಿರುವ ಅಂಶವನ್ನು ಪ್ರಸ್ತಾಪಿಸಿ ಗದ್ಗದಿತರಾದ ಅವರು, ಇಂಥ ಸಂಕಷ್ಟ ಸಮಯದಲ್ಲಿ ಭಾರತವು ಇಸ್ರೇಲ್ ಪರವಾಗಿ ಬಲ ನಿಂತಿರುವುದಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು.ಕೆಲ ಶಕ್ತಿಗಳು ಹಮಾಸ್‌ಗೆ ಆರ್ಥಿಕ, ಶಸ್ತ್ರಾಸ್ತ್ರ ನೆರವು ನೀಡುತ್ತಿರುವ ಬಗ್ಗೆ ಅತೀವ ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಹಾಗೂ ಇಸ್ರೇಲ್ ನಡುವೆ ಅಭಿವೃದ್ಧಿಯ ಪರಿಕಲ್ಪನೆಗಳ ವಿನಿಮಯ ಹಾಗೂ ಸೌಹಾರ್ದ ಸಂಬಂಧ ವೃದ್ಧಿಸುವ ನಿಟ್ಟಿನಲ್ಲಿಯೂ ಮಾತುಕತೆ ನಡೆಸಿದರು.
ಸಮಾನ ಆಸಕ್ತಿ, ದೃಷ್ಟಿಕೋನದಿಂದ ಬೆಳೆಯುತ್ತಿರುವ ಕರ್ನಾಟಕ, ಇಸ್ರೇಲ್ ನಡುವೆ ಸಮಾನ ಹಿತಾಸಕ್ತಿಗಳು ಕೂಡ ಇದ್ದು, ಈ ನಿಟ್ಟಿನಲ್ಲಿ ನಾವೆಲ್ಲರೂ ದೀರ್ಘಕಾಲೀನ ದೃಷ್ಟಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಟಾಮಿ ಬೆನ್-ಹೈಮ್ ಮನವಿ ಮಾಡಿದರು.
ಆತ್ಮೀಯ ಸತ್ಕಾರ:ತಮ್ಮ ತೋಟಕ್ಕೆ ಆಗಮಿಸಿದ ಟಾಮಿ ಬೆನ್-ಹೈಮ್ ಅವರನ್ನು ಕುಮಾರಸ್ವಾಮಿ ಅವರು ಅತ್ಯಂತ ಆತ್ಮೀಯವಾಗಿ ಬರ ಮಾಡಿಕೊಂಡು ಗೌರವಿಸಿದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಟಾಮಿ ಬೆನ್-ಹೈಮ್ ಅವರಿಗೆ ತಮ್ಮ ಇಡೀ ತೋಟವನ್ನು ತೋರಿಸಿ, ಬಾಳೆಗೊನೆಯನ್ನು ನೀಡಿ ಸತ್ಕರಿಸಿದರು. ತೋಟದಲ್ಲಿ ಬೆಳೆಯಲಾಗಿರುವ ಅಡಿಕೆ, ಬಾಳೆ, ತೆಂಗು ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದರು. ಹಾಗೂ ಜಲ ಮರುಪೂರಣದ ಬಗ್ಗೆ ವಿಶೇಷವಾಗಿ ಹೈಮ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
