ಬೆಂಗಳೂರು:ರಾಜ್ಯದ ಜೀವನದಿ ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದನ್ನು ಹಾಗೂ ಹಾಗೂ ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದರ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಪತ್ರ ಬರೆದು ಸರ್ಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ.
ಇದನ್ನೂ ಓದಿ:ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ, ದದ್ದಲ್‌ಗೆ ಎಸ್‌ಐಟಿ ನೋಟಿಸ್
ಕಾವೇರಿ ನದಿ ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದು ಸಮಸ್ಯೆಯ ತೀವ್ರತೆಯನ್ನು ವಿವರಿಸಿದ್ದರು. ಈಗ ಅವರ ಸೂಚನೆ ಮೇರೆಗೆ ಸಮಿತಿಯನ್ನು ರಚನೆ ಮಾಡಿ ಆದೇಶಿಸಲಾಗಿದೆ.
ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತದ ತಡೆಯ ಬಗ್ಗೆ ಪರಿಶೀಲಿಸಿ 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ರಚಿಸಲಾದ ತಜ್ಞರ ಸಮಿತಿಗೆ ಅರಣ್ಯ ಇಲಾಖೆ ಸೂಚನೆಯನ್ನು ನೀಡಿದೆ.
1. ನಿರಂಜನ್, ಮುಖ್ಯ ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು – ಅಧ್ಯಕ್ಷರು2. ಅಧೀಕ್ಷಕ ಅಭಿಯಂತರರು, ಕಾವೇರಿ ನೀರಾವರಿ ನಿಗಮ ನಿಯಮಿತ, ಮೈಸೂರು- ಸದಸ್ಯರು3. ಅಧೀಕ್ಷಕ ಅಭಿಯಂತರರು, ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಮೈಸೂರು – ಸದಸ್ಯರು4 ಅಧೀಕ್ಷಕ ಅಭಿಯಂತರರು, ಮೈಸೂರು ಮಹಾನಗರ ಪಾಲಿಕೆ – ಸದಸ್ಯರು5. ವಿಭಾಗ ಮುಖ್ಯಸ್ಥರು(HOD), ಪರಿಸರ ವಿಜ್ಞಾನ ಸದಸ್ಯರು ಅಧ್ಯಯನ ವಿಭಾಗ, ಮೈಸೂರು ವಿಶ್ವವಿದ್ಯಾಲಯ ಮಾನಸ ಗಂಗೋತ್ರಿ – ಸದಸ್ಯರು6. ಡಾ. ಬಿ.ಮನೋಜ್‌ಕುಮಾರ್, ಪ್ರಾಧ್ಯಾಪಕರು, ಶ್ರೀ ಸದಸ್ಯರು ಜಯಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜ್ ಆಫ್ ಮೈಸೂರು – ಸದಸ್ಯರು7 ಕಾರ್ಯನಿರ್ವಾಹಕ ಅಭಿಯಂತರರು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ, ಮೈಸೂರು – ಸದಸ್ಯರು8. ಎಂ.ಬಿ.ಪ್ರಕಾಶ್, ನಿವೃತ್ತ ಹಿರಿಯ ಪರಿಸರ ಅಧಿಕಾರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮೈಸೂರು – ಸದಸ್ಯರು9 ಹಿರಿಯ ಪರಿಸರ ಅಧಿಕಾರಿ, ಪ್ರಾದೇಶಿಕ ಕಛೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮೈಸೂರು – ಸದಸ್ಯ ಸಂಯೋಜಕರುಈ ಆದೇಶ ತಲುಪಿದ 10 ದಿನಗಳ ಒಳಗಾಗಿ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ದಿನದಂದು ಸಮಿತಿಯ ಕಾರ್ಯಾವಧಿ ಮುಕ್ತಾಯಗೊಳ್ಳುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸಚಿವರು, ಸರ್ಕಾರಕ್ಕೆ ಶಾಸಕರಿಗೆ ಅಭಿನಂದನೆ:ನಮ್ಮ ರಾಜ್ಯ ಸರ್ಕಾರವು ಈ ನೆಲ, ಜಲ, ರೈತರ, ನಾಗರಿಕರ ರಕ್ಷಣೆಗೆ ಸದಾ ಒಂದು ಹೆಜ್ಜೆ ಮುಂದೆ ಇರುತ್ತದೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.

ಜೀವನದಿ ಕಾವೇರಿ ಉಳಿವಿಗಾಗಿ ಈಗ ಸಮಿತಿಯನ್ನು ರಚನೆ ಮಾಡಿರುವುದು ಅಭಿನಂದನೀಯ ಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಅವರಿಗೆ ಧನ್ಯವಾದಗಳನ್ನು ಹೇಳಬಯಸುತ್ತೇನೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
