ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆಯಂತೆ ನಿಗಮ-ಮಂಡಳಿಗಳಿಗೆ ನೇಮಕ‌ ಆದೇಶದ ಸರಣಿ ಮುಂದುವರಿದಿದ್ದು, ಬುಧವಾರ ಸಂಜೆಯ ವೇಳೆಗೆ 15ಕ್ಕೂ ಹೆಚ್ಚು ನಿಗಮ-ಮಂಡಳಿಗಳಿಗೆ ನೇಮಕ ಆದೇಶಗಳು ಹೊರ ಬೀಳುವ ಸಾಧ್ಯತೆಗಳಿವೆ.ರಾಯಚೂರು ಜಿಲ್ಲೆ ಲಿಂಗಸುಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ಅವರು ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಬಿಜೆಪಿ ಮುಖಂಡ ಎಸ್.ಲಿಂಗಮೂರ್ತಿ ಅವರನ್ನು ಕರ್ನಾಟಕ ರಾಜ್ಯ ಖನಿಜಗಳ ನಿಗಮ ( ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್)ದ ನಿರ್ದೇಶಕರನ್ನಾಗಿ ನೇಮಿಸಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆದೇಶಿಸಿದೆ.
ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೆಳೆಗಾರ ಮಹಾಮಂಡಳಿ ಹುಬ್ಬಳ್ಳಿಯ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಡಾ. ವಿಶ್ವನಾಥ ಈ ಪಾಟೀಲ, ಕರ್ನಾಟಕ ರಾಜ್ಯ ಸಹಕಾರ ಕುಕ್ಕಟ ಮಹಾಮಂಡಳ ನಿಗಮ ಬೆಂಗಳೂರು ಅಧ್ಯಕ್ಷರನ್ನಾಗಿ ಶ್ರೀ ಯಲ್ಲಮ್ಮ ಮಲ್ಲಪ್ಪ ಬೆಂಡಿಗೇರಿಯವರನ್ನು ಮತ್ತು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶರಣು ಭೀಮಣ್ಣ ತಳ್ಳಿಕೇರಿಯವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 20 =
Remember me
