ಬೆಂಗಳೂರು:ರಾಜ್ಯದಲ್ಲಿ ಬಿಸಿ ಗಾಳಿ ಮುಂದುವರಿದಿದ್ದು, ಸೋಮವಾರ 8 ಜಿಲ್ಲೆಗಳಲ್ಲಿ ಉಷ್ಣಾಂಶ 40ರ ಗಡಿ ದಾಟಿದೆ. 18 ಜಿಲ್ಲೆಗಳಲ್ಲಿ 37-39ರ ಅಸುಪಾಸಿನಲ್ಲಿ ತಾಪಮಾನ ದಾಖಲಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ವಾಡಿಕೆಯಷ್ಟೇ ಇದೆ. ಆದರೆ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ 2-4 ಡಿ.ಸೆ.ಹೆಚ್ಚು ಉಷ್ಣಾಂಶ ದಾಖಲಾಗುತ್ತಿದ್ದು, ಇದರಿಂದಾಗಿ ಕರುನಾಡು ಕಾದ ಕೆಂಡವಾಗಿದೆ. ಕೆಲವೆಡೆ ರಾತ್ರಿ ವೇಳೆ ಬೆಚ್ಚಗಿನ ವಾತಾವರಣ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿಯೂ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶ ಇನ್ನಷ್ಟು ಹೆಚ್ಚಳಗೊಂಡು ಬಿಸಿ ವಾತಾವರಣ ಜನರಿಗೆ ಬಾಧಿಸಲಿದೆ.
ಬಳ್ಳಾರಿ 43.3, ಕಲಬುರಗಿ 42.7, ರಾಯಚೂರು 41.1, ಬಾಗಲಕೋಟೆ 40.5, ಕೊಪ್ಪಳ 40.3, ವಿಜಯಪುರ 40, ತುಮಕೂರು 40.5 ಉಷ್ಣಾಂಶ ದಾಖಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಕಲಬುರಗಿ, ರಾಯಚೂರು, ಬಳ್ಳಾರಿ ಸೇರಿ ಅರ್ಧ ಕರ್ನಾಟಕಕ್ಕೆ ಮುಂದಿನ ಎರಡು ದಿನ ಬಿಸಿಗಾಳಿ ತಾಪ ತಟ್ಟಲಿದೆ. ಕೊಪ್ಪಳ, ರಾಯಚೂರು, ಕಲಬುರಗಿಯಲ್ಲಿ ರಾತ್ರಿ ವೇಳೆ ಬೆಚ್ಚಗಿನ ವಾತಾವರಣ ಉಂಟಾಗಲಿದೆ. ಉಡುಪಿ, ದಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಐದು ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ 37ರ ಅಸುಪಾಸಿನಲ್ಲಿ ಉಷ್ಣಾಂಶ ದಾಖಲಾಗುತ್ತಿದ್ದು, ಶುಷ್ಕ ವಾತಾವರಣ ಇರಲಿದೆ. ಕನಿಷ್ಠ ಉಷ್ಣಾಂಶ 23 ಡಿ.ಸೆ.ಇರಲಿದೆ.
ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ ಧನುಷ್​ ಮತ್ತು ಐಶ್ವರ್ಯಾ!
12ರಿಂದ ಮಳೆಬಿಸಿಲಿನ ಹೊಡೆತಕ್ಕೆ ತತ್ತರಿಸಿರುವ ರಾಜ್ಯಕ್ಕೆ ಏ.12ರಿಂದ ಮಳೆ ಸಿಂಚನವಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು, ಬೆಂ.ಗ್ರಾಮಾಂತರ, ಹಾಸನ,ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಏ.12ರಿಂದ ಏ.15ರವರೆಗೆ ಮಳೆ ಬೀಳಲಿದೆ. ದಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಏ.14,ಏ.15ರಂದು ಹಗುರದಿಂದ ಕೂಡಿದ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − five =
Remember me
