ಬೆಂಗಳೂರು:ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಕೆಡಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸುತ್ತಿದೆ. ಈ ಮೂಲಕ ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.
ಇದನ್ನೂ ಓದಿ:ಎನ್​ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್ ಮಂಡನೆ: ಕೇಂದ್ರದ ವಿರುದ್ಧ ಡಿಕೆಶಿ ಆಕ್ರೋಶ
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ಇ.ಡಿ ಆಧಿಕಾರಿಗಳ ವರ್ತನೆ ವಿರೋಧಿಸಿ, ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಮಂಗಳವಾರ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸಿದರು. ಬಳಿಕ ಮಾತನಾಡಿದ ಸಚಿವರು, ಇ.ಡಿಯನ್ನ ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ. ನಮ್ಮ ಸರ್ಕಾರವನ್ನ ಅಸ್ಥಿರ ಗೊಳಿಸುವುದೇ ಕೇಂದ್ರ ಸರ್ಕಾರದ ಮೂಲ ಉದ್ದೇಶ ಎಂದು ವಾಗ್ದಾಳಿ ನಡೆಸಿದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ನ್ಯಾಷನಲ್ ಬ್ಯಾಂಕ್​ಗಳ ಪಾತ್ರ ಕಂಡು ಬಂದಿದೆ. ಹಾಗಿದ್ದರೆ, ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲು ರಾಜೀನಾಮೆ ನೀಡಲಿ. ನಾವು ಯಾವ ತನಿಖೆಗೂ ಹೆದರಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಎಸೆದರು.
ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ, ಕೇಂದ್ರದ ಇ.ಡಿಗೆ ಹೆದರುತ್ತೇವಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಂಕ ತರಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಎಸ್​ಐಟಿ ಮೂಲಕ ತನಿಖೆಯನ್ನ ನಾವೇ ಮಾಡಿಸುತ್ತಿದ್ದೇವೆ. ಆದರೆ ಕೇಂದ್ರದವರು ಇ.ಡಿ ಮೂಲಕ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.
ನಾವು ಸದನದ ಹೊರಗೆ ಒಳಗೆ ಹೋರಾಡುತ್ತೇವೆ. ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ. ಕೇಂದ್ರ ಸರ್ಕಾರದ ಯಾವುದೇ ಬೆದರಿಕೆಗಳಿಗೆ ಅಂಜುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ವಿಧಾನ ಪರಿಷತ್‌ ವಿಪಕ್ಷ ನಾಯಕನಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ: ಆಕಾಂಕ್ಷಿಯಾಗಿದ್ದ ಸಿಟಿ ರವಿ, ರವಿ ಕುಮಾರ್​ಗೆ ನಿರಾಸೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + 2 =
Remember me
