ಬೆಳಗಾವಿ:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಶನಿವಾರ ತನಿಖಾ ತಂಡದ ಪೊಲೀಸರು ಬೆಳಗಾವಿ ತಾಲೂಕಿನ ಬಡಸ ಕೆ.ಎಚ್. ಗ್ರಾಮದಲ್ಲಿರುವ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಂದ ಮಾಹಿತಿ ಸಂಗ್ರಹಿಸಿದರು.
ಹಿಂಡಲಗಾ ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿ ಮೃತ ಸಂತೋಷ ಪಾಟೀಲ ಕೈಗೊಂಡಿದ್ದರು ಎನ್ನಲಾದ ರಸ್ತೆ ಸೇರಿ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲಿಸಿ, ವಿವರ ಸಂಗ್ರಹಿಸಿದ್ದಾರೆ. ತನಿಖಾ ತಂಡದಲ್ಲಿ ಸಿಪಿಐ ಶರಣಗೌಡ ಮತ್ತು ನಾಲ್ವರು ಸಿಬ್ಬಂದಿ, ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ತಂಡದಲ್ಲಿರುವ ಬಗ್ಗೆ ತಿಳಿದುಬಂದಿದೆ.
ಪ್ರಕರಣದಲ್ಲಿ ತಾಂತ್ರಿಕ ತನಿಖೆ ಮಹತ್ವದ ಪಾತ್ರ ವಹಿಸಲಿದ್ದು, ಮೊಬೈಲ್ ಫೋನ್​ ಕರೆಗಳ ಪರಿಶೀಲನೆ, ವಾಟ್ಸ್​ಆ್ಯಪ್​ ಸಂದೇಶ ಕಳುಹಿಸಿರುವುದು, ವಾಟ್ಸ್​ಆ್ಯಪ್​ ಸಂದೇಶಗಳನ್ನು ಕನ್ನಡದಲ್ಲಿ ಮಾಡುತ್ತಿರುವುದು, ಯಾರೆಲ್ಲರ ಜತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದರು, ಹಣಕಾಸಿನ ವಹಿವಾಟು ಕುರಿತು ಆಳವಾದ ತನಿಖೆ ನಡೆಯುತ್ತಿದೆ. ಹಿಂಡಲಗಾ ಗ್ರಾಮ ಪಂಚಾಯತ್ ಅಧ್ಯಕ್ಷ, ಅಧಿಕಾರಿಗಳನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂಬ ಮಾಹಿತಿ ತಿಳಿದು ಬಂದಿದೆ.
ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 1 =
Remember me
