ಬೆಂಗಳೂರು: ಬಿಬಿಎಂಪಿ ಕಾಮಗಾರಿ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆಯಲ್ಲಿ ಅಕ್ರಮ ಸಾಬೀತಾದರೆ ಅಂತಹ ಗುತ್ತಿಗೆದಾರರನ್ನ ಬ್ಲಾಕ್ ಲಿಸ್ಟ್‌ಗೆ ಸೇರಿಸಲು ಸಿಎಂ ನೇತೃತ್ವದ ಬೆಂಗಳೂರು ಶಾಸಕರ ಸಭೆಯಲ್ಲಿ ನಿರ್ಧಾರವಾಗಿದೆ. ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೂ ತೀರ್ಮಾನಿಸಿದ್ದು, ಆದಷ್ಟು ಬೇಗ ತನಿಖೆ ಮುಗಿದರೆ ಸೂಕ್ತ ಎಂದು ಶಾಸಕರು ಸಭೆಯಲ್ಲಿ ಒತ್ತಾಯಿಸಿದ್ದಾರೆ.
ಗುತ್ತಿಗೆದಾರರ ಕಾಮಗಾರಿ ಸಂಬಂಧ ನಡೆಯುತ್ತಿರುವ ತನಿಖೆಗೆ ನಮ್ಮ ಬೆಂಬಲ ಇದೆ, ಆದರೆ ಆದಷ್ಟು ಬೇಗ ತನಿಖೆ ಮುಗಿಸಬೇಕು. ಆಗಸ್ಟ್ ಅಂತ್ಯದೊಳಗೆ ನಾಲ್ಕು ಸಮಿತಿಗಳ ತನಿಖೆ ನಡೆಸಿ ವರದಿ ಬರುವಂತೆ ನೋಡಿಕೊಳ್ಳಬೇಕು. ತಿಂಗಳಾಂತ್ಯ ಇಲ್ಲವೇ ಸೆಪ್ಟೆಂಬರ್ ಮೊದಲ ವಾರವೆ ಬಾಕಿ ಬಿಲ್ ಬಿಡುಗಡೆಗೆ ಕ್ರಮಕೈಗೊಳ್ಳುವಂತೆ ಶಾಸಕರ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಗಹನ ಚರ್ಚೆಯೂ ನಡೆದಿದೆ.
ಈ ವೇಳೆ ಎರಡು ಮೂರು ವಾರಗಳಲ್ಲಿ ತನಿಖಾ ವರದಿ ಕೈ ಸೇರಲಿದೆ ಎಂಬ ಸ್ಪಷ್ಟತೆಯೂ ಶಾಸಕರು ಪಡೆದುಕೊಂಡರು. ಯಾರು ಸರಿಯಾಗಿ ಕಾಮಗಾರಿ ನಡೆಸಿದ್ದಾರೋ ಅಂತಹ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಿದರಾಯಿತು, ಈ ವಿಚಾರದಲ್ಲಿ ನಾವು ಸರ್ಕಾರದ ಜತೆ ಇರುತ್ತೇವೆ ಎಂದು ಶಾಸಕರು ಭರವಸೆ ನೀಡಿದರು.
ಈಗಲೇ ಹಣ ಬಿಡುಗಡೆ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹಾಕಿರುವ ಗುತ್ತಿಗೆದಾರರ ವಿಷಯವನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ, ಅಕ್ರಮವಾದ ಬಗ್ಗೆ ದೂರಿದೆ, ನಾವು ತನಿಖೆ ಮಾಡಿಸಬಾರದೇ ಎಂದು ಪ್ರಶ್ನಿಸಿದರು.ಯಾರು ಪಾರದರ್ಶಕವಾಗಿ ಕಾಮಗಾರಿ ನಡೆಸಿದ್ದಾರೆಂಬುದು ತನಿಖೆಯಿಂದ ಗೊತ್ತಾಗಲಿದೆ. ಈಗ ತನಿಖೆ ಪ್ರಾರಂಭವಾಗಿದೆ. ಶೀಘ್ರ ತನಿಖೆ ಮುಗಿಯಲಿದೆ. ತನಿಖಾ ವರದಿ ಕೈಸೇರಿದ ಬಳಿಕ ಕಷ್ಟದಲ್ಲಿರುವ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡೋಣ. ಆದಷ್ಟು ಬೇಗ ಹಣ ಬಿಡುಗಡೆ ಮಾಡೋಣ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + eleven =
Remember me
