ಬೆಂಗಳೂರು:ಹಿಂದೆ ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘ ಆರೋಪಿಸಿತ್ತು. ಈಗ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಮತ್ತೊಂದು ಮಹತ್ವದ ಸುದ್ದಿಗೋಷ್ಟಿ ನಡೆಸುತ್ತಿದ್ದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಚಾಮರಾಜಪೇಟೆಯ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದ್ದು ಅಧ್ಯಕ್ಷ ಡಿ.ಕೆಂಪಣ್ಣ ಬಾಕಿ ಇರುವ ಒಟ್ಟು 25 ಸಾವಿರ ಕೋಟಿ ಬಾಕಿ ಮೊತ್ತ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಲ್ಲಿ 4 ಸಾವಿರ ಕೋಟಿ ಬಿಲ್ ಬಾಕಿ ಇದ್ದು ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ಸಣ್ಣ ನೀರಾವರಿ ಇಲಾಖೆಯ ಸುಮಾರು 8ಸಾವಿರ ಕೋಟಿ ರೂ. ಬಾಕಿ ಇದೆ. ಬಿಬಿಎಂಪಿ ಕೂಡ 3 ಸಾವಿರ ಕೋಟಿ ರೂ. ಬಾಕಿ ಬಿಲ್ ಉಳಿಸಿಕೊಂಡಿದ್ದು ಇದೇ ತಿಂಗಳ 18 ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಕೂಡ ನಡೆಸಲು ಯೋಜನೆ ಮಾಡಲಾಗಿದೆ ಎಂದು ಅಧ್ಯಕ್ಷ ಕೆಂಪಣ್ಣ ಮಾಹಿತಿ ನೀಡಿದ್ದಾರೆ. ಈ ಪ್ರತಿಭಟನೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರತಿಭಟನೆಯಲ್ಲಿ ರಾಜ್ಯದ ಸುಮಾರು 20,000ಕ್ಕೂ ಹೆಚ್ಚು ಗುತ್ತಿಗೆದಾರರು ಭಾಗಿ ಎಂದು ಹೇಳಲಾಗುತ್ತಿದೆ.
ಗುತ್ತಿಗೆದಾರರು ಹೇಳ್ತಿರೋದೇನು?‘ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆದಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ನಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳಿಗೆ ಸರಕಾರಗಳೂ ಸ್ಪಂದಿಸುತ್ತಿಲ್ಲ. ಪ್ರತೀ ಸರಕಾರಕ್ಕೂ ಮನವಿ ಸಲ್ಲಿಸುತ್ತಾ ನಮ್ಮ ಬೇಡಿಕೆಗಳಿಗೆ ಹಂತ ಹಂತವಾಗಿಯಾದರೂ ಸ್ಪಂದಿಸುವಂತೆ ಕೇಳಿಕೊಂಡಿದ್ದೇವೆ. ಆದರೂ ಸರಕಾರಗಳು ನಿರ್ಲಕ್ಷ್ಯ ಧೋರಣೆಯನ್ನು ಪ್ರದರ್ಶಿಸುತ್ತಿವೆ. ಮುಖ್ಯಮಂತ್ರಿಗಳು, ಸಚಿವರು ಮತ್ತು ಅಧಿಕಾರಿಗಳಿಗೆ ನೂರಾರು ಪತ್ರಗಳನ್ನು ಬರೆದರೂ ಯಾವುದೇ ಕ್ರಮ ಕೈಗೊಂಡಿಲ್ಲ.
ಇದರಿಂದ ಹೋರಾಟದ ಹಾದಿಯನ್ನು ಹಿಡಿಯುವುದು ಅನಿವಾರ್ಯವಾಗಿದೆ. ನಮ್ಮ ಈ ಹೋರಾಟಕ್ಕೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳು ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸಲಾಗುತ್ತೆ. ಸರಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಬೇಕಾಗುತ್ತದೆ. ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡಬೇಡಿ ಎಂದು ಎಚ್ಚರಿಕೆ. ನಮ್ಮ ಬೇಡಿಕೆಗಳು ಈಡೇರಿಸಲಾಗದಂತಹ ಸಮಸ್ಯೆಗಳೇನೂ ಅಲ್ಲ. ಪೂರ್ಣಗೊಳಿಸಿರುವ ಕಾಮಗಾರಿಗಳಿಗೆ ಬಾಕಿ ಮೊತ್ತ ಬಿಡುಗಡೆ ಮಾಡುವಂತೆ ಕೇಳುವುದು ತಪ್ಪೇ? ಆದಷ್ಟು ಬೇಗ ಜಿಎಸ್‌ಟಿ ಗೊಂದಲವನ್ನು ಬಗೆಹರಿಸಿ.
ಈ ಸಮಸ್ಯೆಗಳಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕೆಲವೇ ದಿನಗಳಲ್ಲಿ ಪರಿಹಾರ ರೂಪಿಸಬಹುದಾದರೂ ಸರಕಾರ ಕಡೆಗಣಿಸುತ್ತಿದೆ. ಆದ್ದರಿಂದ ಹೋರಾಟದ ಮೂಲಕವೇ ಸರಕಾರವನ್ನು ಎಚ್ಚರಿಸುವುದು ಅನಿವಾರ್ಯವಾಗಿದೆ. ಈ ಹಿಂದೆ 2022ರ ಏಪ್ರಿಲ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಗುತ್ತಿಗೆದಾರರೊಂದಿಗೆ ಚರ್ಚಿಸಿದ್ದರು. ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ಪರಿಹಾರ ರೂಪಿಸುವ ಭರವಸೆ ನೀಡಿದ್ದರು. ಆದರೆ ಇಂದಿಗೂ ಯಾವುದೇ ಪ್ರಯೋಜನವಾಗಿಲ್ಲ. ಅವರ ಭರವಸೆಗಳು ಕೇವಲ ಕಡತಗಳಲ್ಲಿ ಮಾತ್ರ ಉಳಿದುಕೊಂಡಿವೆ’ ಎಂದು ಗುತ್ತಿಗೆದಾರರು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + eighteen =
Remember me
