ಬೆಂಗಳೂರು:ಮೀಟರ್ ಬಡ್ಡಿ ವಿಧಿಸಿ ಬಲವಂತದಿಂದ ಸಾಲ ವಸೂಲಿ ಮಾಡುವ ಲೇವಾದೇವಿದಾರರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಸಾಲ ಕೊಟ್ಟು ಹೆಚ್ಚಿನ ಬಡ್ಡಿಗಾಗಿ ಕಿರುಕುಳ ನೀಡಿ ಬಲವಂತದಿಂದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಸಂಬಂಧ ಕರ್ನಾಟಕ ಲೇವಾದೇವಿದಾರರ ಕಾಯ್ದೆಗೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಹಕಾರ ಇಲಾಖೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮನಿ ಲಾಂಡರಿಂಗ್ ಕಾಯ್ದೆಗೆ ಕೆಲವು ತಿದ್ದುಪಡಿ ತರುವುದು ಸರ್ಕಾರದ ಉದ್ದೇಶವಾಗಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ಕರ್ನಾಟಕ ಮನಿ ಲಾಂಡರಿಂಗ್ ಆಕ್ಟ್​ನ ಕಲಂ 38 ಮತ್ತು 39ಕ್ಕೆ ತಿದ್ದುಪಡಿ ತರಲು ಸಂಪುಟ ಒಪ್ಪಿಗೆ ನೀಡಿದೆ. ಈ ಕಾಯ್ದೆಯಲ್ಲಿ ಒತ್ತಾಯಪೂರ್ವಕ ಸಾಲ ಮತ್ತು ಬಡ್ಡಿ ವಸೂಲಿಗೆ 6 ತಿಂಗಳು ಶಿಕ್ಷೆ ವಿಧಿಸಲಾಗುತ್ತಿತ್ತು. ಅದನ್ನೀಗ ಮೊದಲ ಅಪರಾಧಕ್ಕೆ 1 ವರ್ಷಕ್ಕೆ ಹೆಚ್ಚಿಸಲಾಗಿದೆ. 2ನೇ ಅಪರಾಧಕ್ಕೆ 2 ವರ್ಷ ನಿಗದಿಪಡಿಸಲಾಗಿದೆ. 5 ಸಾವಿರ ರೂ. ಇದ್ದ ದಂಡವನ್ನು 50 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.
ಕೋವಿಡ್ ನಿಯಂತ್ರಣಕ್ಕೆ 700 ಕೋಟಿ ರೂ. ವೆಚ್ಚ:ಕೋವಿಡ್ ಸಂದರ್ಭದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಜನವರಿವರೆಗೆ ನೀಡಿರುವ ಚಿಕಿತ್ಸಾ ವೆಚ್ಚದ ಬಾಬ್ತು 620 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಮಾರ್ಚ್ ಅಂತ್ಯದವರೆಗೆ 80 ಕೋಟಿ ರೂ. ಸೇರಿದಂತೆ ಒಟ್ಟು 700 ಕೋಟಿ ರೂ. ಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್​ಗೆ ಪಾವತಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ ಈವರೆಗೆ 311 ಕೋಟಿ ರೂ.ಖರ್ಚಾಗಿದೆ. ಉಳಿದ ಅಂದಾಜು ಮೊತ್ತಕ್ಕೆ ಅನುಮೋದನೆ ಪಡೆಯಲಾಗಿದೆ ಎಂದು ಹೇಳಿದರು.
ಬೆಂಗಳೂರು:ಕರ್ನಾಟಕ ರಾಜ್ಯ ವಿವಾದ ನಿರ್ಣಯ ನೀತಿ 2021ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರದ ಪರವಾಗಿ ದಾವೆಗಳನ್ನು ಪರಿಣಾಮಕಾರಿಯಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಲು ಅನುಕೂಲವಾಗುವುದರಿಂದ ಈ ನೀತಿ ಜಾರಿಗೆ ತರಲು ನಿರ್ಣಯಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಕಾನೂನು ಸಚಿವ ಬಸವರಾಜ ಬೊಮ್ಮಾಯಿ, ಪ್ರಸ್ತುತ ಜಾರಿಯಲ್ಲಿರುವ 2011ರ ರಾಜ್ಯ ವ್ಯಾಜ್ಯಗಳ ನೀತಿ ಕೇಂದ್ರ ಸರ್ಕಾರದ ನೀತಿಗನುಗುಣವಾಗಿದೆ. ಅಡ್ವೋಕೇಟ್ ಜನರಲ್ ಪ್ರಸ್ತಾಪಿಸಿರುವ ರಾಜ್ಯ ವ್ಯಾಜ್ಯಗಳ ನೀತಿಯಲ್ಲಿ ಪ್ರಸಕ್ತ ಸನ್ನಿವೇಶಕ್ಕೆ ತಕ್ಕಂತೆ ಕೆಲವು ಹೊಸ ಅಂಶಗಳು ಒಳಗೊಂಡಿರುವುದರಿಂದ ರಾಜ್ಯ ಪರವಾಗಿ ವ್ಯಾಜ್ಯಗಳನ್ನು ಪರಿಣಾಮಕಾರಿಯಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಲು ಈ ನೀತಿ ಅನುಕೂಲವಾಗಲಿದೆ ಎಂದು ಹೇಳಿದರು. ಈ ನೀತಿಯಲ್ಲಿ ಸಮಿತಿಯ ಕಾರ್ಯ ಚಟುವಟಿಕೆ, ನೋಡಲ್ ಅಧಿಕಾರಿ ನೇಮಕ, ಅವರ ಪಾತ್ರ ಹಾಗೂ ಜವಾಬ್ದಾರಿ, ಸರ್ಕಾರಿ ಇಲಾಖೆಗಳ ನಡುವೆ ಹಾಗೂ ಇತರ ಯಾವುದೇ ಇಲಾಖೆಗಳ ಪ್ರಮುಖ ವ್ಯಾಜ್ಯದ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ/ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಅಂತರ್ ವಿಭಾಗೀಯ ವಿವಾದ ಪರಿಹಾರ ಸಮಿತಿಗಳನ್ನು ರಚನೆ ಮಾಡಲು ಶಿಫಾರಸು ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
