ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯು ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತರಾಟೆ ತೆಗೆದುಕೊಂಡರು.
ಇಂತಹ ಅಸಂಬದ್ಧ ಹೇಳಿಕೆಗಳನ್ನು ನೀಡುವ ಸಚಿವರಿಗೆ ಮುಖ್ಯಮಂತ್ರಿ ಕರೆದು ಬುದ್ದಿ ಹೇಳಲಿ ಎಂದು ಸುದ್ದಿಗೋಷ್ಠಿಯಲ್ಲಿ ಸಲಹೆ ನೀಡಿದರು.
ಇದು ಎಂದೋ ಮುಗಿದು ಹೋಗಿರುವ ವಿಷಯ. ಅದನ್ನು ಮತ್ತೆ ಮತ್ತೆ ಕೆಣಕುವ ಅಗತ್ಯ ಏನಿದೆ? ಬಹುಶಃ ಅವರಿಗೆ ಮಹಾರಾಷ್ಟ್ರದ ವ್ಯಾಮೋಹದಿಂದ ಹೊರಬರಲು ಸಾಧ್ಯವಿಲ್ಲ. ನೆರೆ ರಾಜ್ಯದ ಮೇಲೆ ಅವರಿಗೆ ವ್ಯಾಮೋಹ ಜಾಸ್ತಿ ಅಂತ ಕಾಣುತ್ತದೆ ಎಂದು ಕಿಡಿಕಾರಿದರು.
ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರೇ ಇಂತಹ ಅನಗತ್ಯ, ವಿವಾದಾಸ್ಪದ ವಿಷಯಗಳನ್ನು ಮಾತಾಡಿದರೆ ನೀವೇ ನೀರು ಎರೆದ ಹಾಗೆ ಅಲ್ಲವಾ? ಸಿಎಂ ಅವರಿಗೆ ಮಂತ್ರಿಗಳ ಮೇಲೆ ಹಿಡಿತ ಇದ್ದರೆ ಅವರನ್ನು ಕರೆದು ಸರಿಯಾಗಿ ಬುದ್ದಿ ಹೇಳಬೇಕು ಎಂದು ಒತ್ತಾಯ ಮಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
