ರಾಮನಗರ:ಮನೆಯಲ್ಲಿ ಅಡುಗೆ ಮಾಡುವ ವೇಳೆ ಕುಕ್ಕರ್ ಸಿಡಿದ ಬಾಲಕಿಯೋರ್ವಳಿಗೆ ಗಂಭೀರ ಗಾಯವಾಗಿರುವ ರಾಮನಗರ ತಾಲ್ಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡಿರುವ ಮಹಾಲಕ್ಷ್ಮೀ(17)ಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಬಾಲಕಿ ಎಂದಿನಂತೆ ಶುಕ್ರವಾರ ಬೆಳಗ್ಗೆ ಅನ್ನ ಮಾಡಲು ಕುಕ್ಕರ್ ಇಟ್ಟಿದ್ದಾಳೆ. ಈ ವೇಳೆ ಅಡುಗೆ ಮನೆಯಲ್ಲಿ ಬಾಲಕಿ ಬೇರೆ ಕೆಲಸ ಮಾಡುತ್ತಿದ್ದ ವೇಳೆ ಕುಕ್ಕರ್​ ಏಕಾಏಕಿ ಸ್ಪೋಟವಾಗಿದೆ.
ಇದನ್ನೂ ಓದಿ:ಬೀದಿ ನಾಯಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ವ್ಯಕ್ತಿ; ಹಗ್ಗದಲ್ಲಿ ಕಳೇಬರ ಎಳೆದೊಯ್ದು ವಿಕೃತಿ
ಸ್ಪೋಟದ ರಭಸಕ್ಕೆ ಮುಖದ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು ತಕ್ಷಣವೇ ಬಾಲಕಿಯನ್ನು ರಾಮನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆ ಬಳಿಕ ವೈದ್ಯರು ಔಷಧಿಗಳನ್ನು ನೀಡಿ ಗಾಯಾಳುವನ್ನು ವಾಪಸ್​ ಮೆನೆಗೆ ಕಳುಹಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ವಿಧಾನಸಭೆ ಚುನಾವಣೆ ಸಂದರ್ಬದಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಒಬ್ಬರು ವಿತರಿಸಿದ್ದ ಕಳಪಙಎ ಗುಣಮಟ್ಟದ ಕುಕ್ಕರ್​ ಎಂದು ಆರೋಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 16 =
Remember me
