ಬೆಂಗಳೂರು:ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಮನೆಯಲ್ಲೇ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಾರು ಚಾಲಕನನ್ನು ರಾಜರಾಜೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕುಂಬಳಗೋಡಿ ನಿವಾಸಿ ಮುನಿರಾಜು(36) ಬಂಧಿತ. ಆರೋಪಿಯಿಂದ 4 ಲಕ್ಷ ರೂ. ಮೌಲ್ಯದ 67 ಗ್ರಾಂ ತೂಕದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಪ್ರೆಸ್ಟೀಜ್ ಬಾಗ್ಮನೆ ಟೆಂಪಲ್‌ಬೆಲ್ಟ್ ಅಪಾರ್ಟ್‌ಮೆಂಟ್ ನಿವಾಸಿ ಕಾರ್ತಿಕ್ ಕಿರಣ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ:ಸಾಗರದಾಚೆ ಎಲ್ಲೋ ‘ಟೋಬಿ’; ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಿರುವ ಚೈತ್ರಾ
ಆರೋಪಿ ಮುನಿರಾಜು ಕಳೆದ ಎರಡು ವರ್ಷಗಳಿಂದ ಕಾರ್ತಿಕ್ ಕಿರಣ್ ಅವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಕೆಲಸಕ್ಕೆ ಬಂದಿದ್ದ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದ.ಈ ಸಂಬಂಧ ಕಾರ್ತಿಕ್ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಸಾಲದ ಸುಳಿಗೆ ಸಿಲುಕಿದ್ದ ಆರೋಪಿ ಮುನಿರಾಜು, ಸಾಲಗಾರರ ಕಾಟ ತಾಳಲಾರದೆ ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
