ಬೆಂಗಳೂರು:ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಮೊಹಮದ್ ಯಾಸಿನ್ ಹಾಗೂ ಮೊಹಮದ್ ಸಬಾಜ್ ಎಂಬ ಇಬ್ಬರಿಗೆ ಕರೊನಾ ವೈರಸ್ ತಗುಲಿರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
‘‘ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದ್ದರ ಫಲವಾಗಿ ಇಂದು ರಾಮನಗರಕ್ಕೂ ಕರೊನಾ ವೈರಸ್ ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್‌ಗೆ ಕರೆದೊಯ್ಯಲಾಗಿದೆ. ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು. ಸರ್ಕಾರದ ಅವಿವೇಕದ ನಿರ್ಧಾರದಿಂದಾಗಿ ರಾಮನಗರ ಜಿಲ್ಲೆಯ ಜನ ಭೀತಿಗೊಂಡಿದ್ದಾರೆ. ಇದನ್ನು ಇನ್ನೂ ಸಹಿಸಲು ಸಾಧ್ಯವಿಲ್ಲ’’ ಎಂದು ಹೇಳಿದ್ದಾರೆ.
‘ಈಗಾಗಲೇ ರಾಜ್ಯದಲ್ಲಿ 445 ಮಂದಿ ಸೋಂಕಿಗೆ ತುತ್ತಾಗಿ, 18 ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಎಂಟು ಜಿಲ್ಲೆಗಳು ಮಾತ್ರ ಸೋಂಕು ಮುಕ್ತವಾಗಿವೆ. ಅವುಗಳಲ್ಲಿ ರಾಮನಗರವೂ ಒಂದು. ಇದೀಗ ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ. ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ’’ ಎಂದಿದ್ದಾರೆ.
‘‘ರಾಮನಗರ ಜೈಲನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯ ನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆಯವರು ಮತ್ತಿತರರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು’’ ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 2 =
Remember me
