ಬೆಂಗಳೂರು: ಉದ್ಯಾನನಗರಿಯಲ್ಲಿ ಸಾರ್ವಜನಿಕರ ಸೇವೆಯಲ್ಲಿ ತೊಡಗಿರುವ ಬಿಎಂಟಿಸಿ ನಿರ್ವಾಹಕ, ಪೊಲೀಸ್ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಗುರುವಾರ 17 ಜನರಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಒಟ್ಟಾರೆ ಕರೊನಾ ಪ್ರಕರಣಗಳ ಸಂಖ್ಯೆ 581ಕ್ಕೆ ತಲುಪಿದ್ದು, ಕಂಟೇನ್ಮೆಂಟ್ ಪ್ರದೇಶಗಳ ಸಂಖ್ಯೆ 113 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ “ಯು” ಅಂದ್ರೆ ಅಗ್ಲಿ: ಪಠ್ಯ ಪುಸ್ತಕದಲ್ಲಿತ್ತು ವರ್ಣ ದ್ವೇಷದ ಪಾಠ!
23ಕ್ಕೆ ಏರಿದ ಸಾವಿನ ಸಂಖ್ಯೆ
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್.ಟಿ. ನಗರದ 35 ವರ್ಷದ ವ್ಯಕ್ತಿ ಹಾಗೂ ಬಂಬೂ ಬಜಾರ್​ನ 60ರ ವೃದ್ಧನಿಗೆ ಬುಧವಾರ ಕರೊನಾ ಸೋಂಕು ಇರುವುದು ದೃಢವಾಗಿತ್ತು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದರೂ ಫಲಿಸದೇ ಗುರುವಾರ ಮೃತಪಟ್ಟಿದ್ದಾರೆ. ಈ ಮೂಲಕ ನಗರದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬಿಟಿಎಂ ಲೇಔಟ್​ನ ಸೋಮೇಶ್ವರ ಕಾಲನಿ, ಮೈಸೂರು ರಸ್ತೆಯ ಮಸ್ಜಿದ್ ಕಾಂಪೌಂಡ್, ವಾಲ್ಮೀಕಿನಗರ, ಬನಶಂಕರಿಯ ಸರಬಂಡೆಪಾಳ್ಯ, ಆನೇಕಲ್​ನ ಹೆನ್ನಾಗರ ಸರ್ಜಾಪುರದ ಕೃಷ್ಣಪ್ಪನಗರ, ಕೆಂಗೇರಿಯ ಲಿಂಗಾಯತರ ಬೀದಿಯಲ್ಲಿ ತಲಾ ಒಬ್ಬರು ಸೇರಿ ಒಟ್ಟು 7 ಜನರು ತೀವ್ರ ಅನಾರೋಗ್ಯ ತೊಂದರೆಯಿಂದ (ಐಎಲ್​ಐ) ಆಸ್ಪತ್ರೆಗೆ ದಾಖಲಾಗಿದ್ದು ಸೋಂಕು ದೃಢಪಟ್ಟಿದೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಎಚ್​ಎಎಲ್ ನಿವಾಸಿಯಲ್ಲಿ ಸೋಂಕು ಕಂಡುಬಂದಿದೆ.
ಮಹಾರಾಷ್ಟ್ರದಿಂದ ಬಂದು ಆನೇಕಲ್​ನ ಅಮೃತಮಹಲ್​ನಲ್ಲಿ ಕ್ವಾರಂಟೈನ್​ನಲ್ಲಿದ್ದ ಒಂದೇ ಕುಟುಂಬದ ಮೂವರಿಗೆ ಹಾಗೂ ತಮಿಳುನಾಡಿನಿಂದ ಬಂದಿದ್ದ ಜಯಂತಿನಗರ ನಿವಾಸಿಗೆ ಕರೊನಾ ಪಾಸಿಟಿವ್ ಬಂದಿದೆ. ಅಂಜನಪ್ಪ ಗಾರ್ಡನ್, ಚಿಕ್ಕಬಾಣಾವರ ಹಾಗೂ ಮಾನ್ಯತಾ ಟೆಕ್​ಪಾರ್ಕ್​ನ ತಲಾ ಒಬ್ಬರಿಗೆ ಸೋಂಕಿತರ ಸಂಪರ್ಕದಿಂದ ಕೋವಿಡ್ ಕಾಣಿಸಿಕೊಂಡಿದೆ. ಪಾದರಾಯನಪುರದ ಮಹಿಳೆ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ.
ಮೂವರು ಆರೋಪಿಗಳಿಗೆ ಪಾಸಿಟಿವ್:ಪಾದರಾಯನಪುರದ ಕಾಪೋರೇಟರ್ ಇಮ್ರಾನ್​ಪಾಷಾ ಸೋಂಕುಮುಕ್ತರಾಗಿ ಮನೆಗೆ ಬರುವಾಗ ನಡೆದ ಮೆರವಣಿಗೆಯಲ್ಲಿ ಭಾಗಿಯಾಗಿ ಬಂಧಿತನಾಗಿದ್ದ ಆರೋಪಿ, ಸೈಬರ್ ಕ್ರೖೆಂ ಠಾಣೆ ಹಾಗೂ ಎಚ್​ಎಸ್​ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿದ್ದ ತಲಾ ಒಬ್ಬರು ಸೇರಿ ಮೂವರು ಆರೋಪಿಗಳಿಗೆ ಸೋಂಕು ದೃಢಪಟ್ಟಿದೆ. ಅವರ ಸಂಪರ್ಕದ ಪೊಲೀಸ್ ಸಿಬ್ಬಂದಿ ಸೇರಿ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದ್ದು, ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಇದೇ ರೀತಿ, ಚಿತ್ರದುರ್ಗದಿಂದ ಬಂದು ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಸೋಂಕು ಕಾಣಿಸಿಕೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್ ಹಾಗೂ ‘ಡಿ’ ಗ್ರೂಪ್ ನೌಕರರು ಸೇರಿ ಹನ್ನೆರಡು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
ಇದನ್ನೂ ಓದಿ:ಉದ್ವೇಗ ನಿಯಂತ್ರಿಸುವ ಯೋಗಾಭ್ಯಾಸ
113 ಕಡೆಗಳಲ್ಲಿ ಕಂಟೇನ್ಮೆಂಟ್: ನಗರದ ಎಂಟು ವಲಯಗಳಲ್ಲಿಯೂ ಕರೊನಾ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರು ವಾಸವಿರುವ ಆಧಾರದಲ್ಲಿ ಕಂಟೇನ್ಮೆಂಟ್ ವಿಧಿಸಲಾಗಿದೆ. ಜೂ.8ರವರೆಗೆ ಕರೊನಾ ಪಾಸಿಟಿವ್ ಕಂಡುಬಂದ ಒಟ್ಟು 113 ಪ್ರದೇಶಗಳಲ್ಲಿ ಕಂಟೇನ್ಮೆಂಟ್ ವಿಧಿಸಲಾಗಿದೆ. ಇದರಲ್ಲಿ 96 ಸೀಮಿತ ಪ್ರದೇಶದ ಕಂಟೇನ್ಮೆಂಟ್, 13 ಅಪಾರ್ಟ್​ವೆುಂಟ್​ಗಳು, 2 ಕೊಳೆಗೇರಿ (ನಾಗವಾರ ಮತ್ತು ಎಸ್.ಕೆ.ಗಾರ್ಡನ್), ಪ್ರಾಥಮಿಕ ಸಂರ್ಪತರು ಹೆಚ್ಚಿರುವ ಒಂದು ಪ್ರದೇಶ ಹಾಗೂ ಒಂದು ಹೋಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ.
ಅಪರಿಚಿತನಿಗೆ ಸೋಂಕು ದೃಢ:ನಾಗರಬಾವಿ ವೃತ್ತದ ಮೇಲ್ಸೇತುವೆಯಿಂದ ಬಿದ್ದು ಮೃತಪಟ್ಟಿದ್ದ ಅಪರಿಚಿತ 40 ವರ್ಷದ ವ್ಯಕ್ತಿಗೆ ಕರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ವ್ಯಕ್ತಿ ಮೃತಪಟ್ಟಿದ್ದ. ವ್ಯಕ್ತಿಯ ಗಂಟಲಿನ ದ್ರವ ಪರೀಕ್ಷಿಸಿದಾಗ ಸೋಂಕು ಪತ್ತೆಯಾಗಿದೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನವಿದ್ದು, ಅವರ ಹೆಸರು ಹಾಗೂ ವಿಳಾಸ ಪತ್ತೆಯಾಗಿಲ್ಲ. ಮೃತನ ಫೋಟೋವನ್ನು ನಗರದ ಹಾಗೂ ಹೊರ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೆ ಕಳುಹಿಸಲಾಗಿದೆ ಎಂದು ಚಂದ್ರಾ ಲೇಔಟ್ ಪೊಲೀಸರು ತಿಳಿಸಿದ್ದಾರೆ.
ಐಎಂಎ ಕಂಪನಿ ಬಹುಕೋಟಿ ವಂಚನೆ: ಆರೋಪಿ ಡಿಸಿ, ಎಸಿ ವಿರುದ್ಧ ಕ್ರಮಕ್ಕೆ ಅನುಮತಿ ಕೋರಿಕೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 2 =
Remember me
