ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 10,517 ಕರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸತತ ನಾಲ್ಕನೇ ದಿನವೂ ಹತ್ತು ಸಾವಿರಕ್ಕೂ ಅಧಿಕ ಹೊಸ ಸೋಂಕಿತರು ಪತ್ತೆ ಆದಂತಾಗಿದೆ. ಮಾತ್ರವಲ್ಲ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಶನಿವಾರ 7 ಲಕ್ಷವನ್ನೂ ದಾಟಿದಂತಾಗಿದೆ.
ರಾಜ್ಯದಲ್ಲಿ ಸೋಂಕಿನ ಸಂಖ್ಯೆ 7,00,786ಕ್ಕೆ ಏರಿದ್ದರೂ ಗುಣವಾದವರಲ್ಲಿ ಶನಿವಾರ ಒಂದೇ ದಿನ 8,337 ಮಂದಿ ಬಿಡುಗಡೆ ಆಗಿ ಮನೆಗೆ ಮರಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಕರೊನಾದಿಂದ ಗುಣವಾದವರ ಸಂಖ್ಯೆ 5,69,947ಕ್ಕೆ ಏರಿದೆ.
ಅದಾಗ್ಯೂ ರಾಜ್ಯದಲ್ಲಿ 120929 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ ಗಂಭೀರ ಲಕ್ಷಣಗಳಿಂದಾಗಿ 892 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಸರದ ಸಂಗತಿ ಎಂದರೆ ಶನಿವಾರ ರಾಜ್ಯದಲ್ಲಿ 102 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕೋವಿಡ್​-19ನಿಂದಾಗಿ ಮೃತಪಟ್ಟವರ ಸಂಖ್ಯೆ 9,891ಕ್ಕೆ ತಲುಪಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 5 =
Remember me
