ಬೆಂಗಳೂರು:ರಾಜ್ಯದಲ್ಲಿ ಹೊಸದಾಗಿ ಪತ್ತೆಯಾಗುವ ಕೋವಿಡ್​-19 ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿದಿದ್ದು, ಸೋಮವಾರ 2,576 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿತರಾಗಿರುವವರ ಒಟ್ಟು ಪ್ರಮಾಣ 8,29,640ಕ್ಕೆ ತಲುಪಿದೆ.
ಮತ್ತೊಂದೆಡೆ ಗುಣಮುಖರ ಪೈಕಿ ಸೋಮವಾರವೊಂದೇ ದಿನ 8,334 ಮಂದಿ ವಿವಿಧ ಆಸ್ಪತ್ರೆ ಹಾಗೂ ಕೋವಿಡ್​ ಕೇರ್ ಸೆಂಟರ್​ಗಳಿಂದ ಬಿಡುಗಡೆ ಆಗಿದ್ದಾರೆ. ಈ ಮೂಲಕ ಇದುವರೆಗೆ ಗುಣವಾದವರ ಸಂಖ್ಯೆ 7,73,595ಕ್ಕೆ ತಲುಪಿದೆ.
ಅದಾಗ್ಯೂ ರಾಜ್ಯದಲ್ಲಿ 44,805 ಪ್ರಕರಣಗಳು ಸಕ್ರಿಯವಾಗಿದ್ದು, ಅವರಲ್ಲಿ 931 ಮಂದಿ ಗಂಭೀರ ರೋಗಲಕ್ಷಣಗಳಿಂದಾಗಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಒಂದೇ ದಿನದಲ್ಲಿ 29 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಕರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 11,221ಕ್ಕೆ ಏರಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + seven =
Remember me
